ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 MAY 2023
SHIMOGA : ಮೊಬೈಲ್ ಫೋನ್ನಲ್ಲಿ (Mobile Phone) ಮಾತನಾಡುತ್ತ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಮೂವರು ಕಳ್ಳರು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್, ಚಾಕುವಿನಿಂದ ಹಲ್ಲೆ
ಸಂದೀಪ್ ಎಂಬುವವರ ರಿಯಲ್ ಮೀ 9 ಪ್ರೋ ಮೊಬೈಲ್ (Mobile Phone) ಕಳ್ಳತನವಾಗಿದೆ. ಕೆಲಸ ಮುಗಿಸಿಕೊಂಡು ಸ್ವಾಮಿ ವಿವೇಕಾನಂದ ಬಡಾವಣೆಯ ಸಿ ಬ್ಲಾಕ್ನಲ್ಲಿರುವ ಮನೆ ಕಡೆಗೆ ನಡೆದು ಹೋಗುತ್ತಿದ್ದರು. ಈ ವೇಳೆ ಸಂದೀಪ್ ಸಹೋದರನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದರು. ಆಗ ಬೈಕಿನಲ್ಲಿ ಬಂದ ಮೂವರು ಸಂದೀಪ್ ಅವರ ಮೊಬೈಲ್ ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






