ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 1 JUNE 2023
SHIMOGA : ರಾಜ್ಯ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪೂರ್ಯ ತಯಾರಿಗೆ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ ಗೌಡ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಜುನಾಥ ಗೌಡ ಅವರಿಗೆ ಪತ್ರ (Letter) ಬರೆದಿದ್ದಾರೆ.
ಪತ್ರದಲ್ಲಿ ಏನಿದೆ?
ಸರ್ಕಾರ ರಚನೆಯಾಗಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿದ್ದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಿದೆ. ಈ ಹಿನ್ನೆಲೆ ಇವೆರಡು ಚುನಾವಣೆಗಳನ್ನು ನಡೆಸಲು ಕಾನೂನಾತ್ಮಕ ಸಾಧಕ ಬಾಧಕಗಳನ್ನು ಪರಾಮರ್ಶಿಸಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ಸಮಿತಿಯು ಚರ್ಚೆ ನಡೆಸಿ, ಸ್ಥಳೀಯ ಮುಖಂಡರನ್ನು ಸಂಪರ್ಕಿಸಿ ಬಹುಮತ ಪಡೆಯುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರದಲ್ಲಿ (Letter) ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?
ಯಾರೆಲ್ಲ ಇದ್ದಾರೆ ಸಮಿತಿಯಲ್ಲಿ?
ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಸಮಿತಿ ಅಧ್ಯಕ್ಷ. ಸಚಿವರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಬಸವರಾಜ ರಾಯರೆಡ್ಡಿ, ಡಾ.ಶರಣ ಪ್ರಕಾಶ್ ಪಾಟೀಲ್, ಆರ್.ಬಿ.ತಿಮ್ಮಾಪುರ, ಶಾಸಕರಾದ ರೂಪಾ ಶಶಿಧರ್, ಎ.ಎಸ್.ಪೊನ್ನಣ್ಣ, ಕೆ.ಎಂ.ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಸಮಿತಿ ಸಂಚಾಲಕರಾಗಿದ್ದಾರೆ. ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ವಿಜಯ ಸಿಂಗ್, ಆರ್.ಎಂ.ಮಂಜುನಾಥ ಗೌಡ ಅವರು ಸಮಿತಿಯಲ್ಲಿ ಇದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ