ಶಿವಮೊಗ್ಗದಲ್ಲಿ ಮತ್ತೊಂದು ಕೇಸ್‌ ದಾಖಲು, ನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್‌ ಕಸಿದು ಪರಾರಿಯಾದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 1 JUNE 2023

SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲನ್ನು (Mobile Phone) ಕಳ್ಳರು ಕಸಿದುಕೊಂಡು ಪರಾರಿಯಾದ ಮತ್ತೊಂದು ಪ್ರಕರಣ ವರದಿಯಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ನಿವೃತ್ತ ಉದ್ಯೋಗಿ ಮಹಾಲಿಂಗ ಗೌಡ ಅವರು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ಎದುರು ಫೋನಿನಲ್ಲಿ ಮಾತನಾಡಿಕೊಂಡು ನಡೆದು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ಯುವಕರು ಮೊಬೈಲ್‌ (Mobile Phone)  ಕಸಿದುಕೊಂಡು ವೇಗವಾಗಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ರಸ್ತೆಯಲ್ಲಿ ನಡೆದು ಹೋಗುವಾಗ ಹುಷಾರ್‌

ಸ್ಯಾಮ್‌ಸಂಗ್‌ ಎ21 ಮೊಬೈಲ್‌ ಕಳ್ಳತನವಾಗಿದೆ. ಕಳ್ಳರು 18 ರಿಂದ 20 ವರ್ಷದವರಾಗಿದ್ದಾರೆ ಎಂದು ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 1, 2023

Leave a Comment