ವಿದ್ಯುತ್‌ ದರ ಹೆಚ್ಚಳ, ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ‘ವಚನ ಭ್ರಷ್ಟತೆ’ಯ ಆರೋಪ, ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 5 JUNE 2023

SHIMOGA : ರಾಜ್ಯ ಸರ್ಕಾರ ವಿದ್ಯುತ್‌ ದರ (Power Price) ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಖಾಸಗಿ ಬಸ್‌ ನಿಲ್ದಾಣದ ಮುಂದೆ ಅಶೋಕ ಸರ್ಕಲ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Shivamogga-Live-Number-1-Website

bjp-protest-against-power-price-hike-in-shimoga

ಪ್ರತಿ ಮನೆಗೂ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ಕೊಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಈಗ ದರ (Power Price) ಏರಿಕೆ ಮಾಡಿದೆ. ಇದು ಖಂಡನೀಯ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಯಾರೆಲ್ಲ ಏನೇನು ಹೇಳಿದರು?

ವಿದ್ಯುತ್ ದರ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕಿದೆ. ಒಂದು ಕಡೆ ಕೊಟ್ಟು ಇನ್ನೊಂದು ಕಡೆ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ. ವಿದ್ಯುತ್ ದರ ಹೆಚ್ಚಳ ನಿರ್ಧಾರ ಹಿಂಪಡೆಯಬೇಕು. ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಸರ್ಕಾರ ಕೈ ಬಿಡಬೇಕು. ಕಾಂಗ್ರೆಸ್‌ನ ದುರಾಡಳಿತವನ್ನು ಬಿಜೆಪಿ ಸಹಿಸುವುದಿಲ್ಲ.ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಶಾಸಕ

Shimoga BJP protest against Power Price Hike

ಅವೈಜ್ಞಾನಿಕ ಭರವಸೆ ನೀಡಿ ಸುಳ್ಳಿನ, ದುರ್ಬಲ ಸರ್ಕಾರ ಅಧಿಕಾರಕ್ಕೆ ಬಂದಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದಿದ್ದರು. ಈಗ ವಿದ್ಯುತ್‌ ದರ ಹೆಚ್ಚಳ ಮಾಡಿ, ಜನರ ಕೋಪಕ್ಕೆ ತುತ್ತಾಗಿದ್ದಾರೆ. ಬಡವರು ದಡ್ಡರಲ್ಲ. ಅವರನ್ನು ಮೋಸ ಮಾಡುವ ಕೃತ್ಯಕ್ಕೆ ಕೈ ಹಾಕಬೇಡಿ.ಟಿ.ಡಿ.ಮೇಘರಾಜ್‌, ಬಿಜೆಪಿ ಜಿಲ್ಲಾಧ್ಯಕ್ಷ

Shimoga BJP protest against Power Price Hike - TD Megharaj, Jyothi Prakash, jagadish

ನಿರೀಕ್ಷೆಯಂತೆ ಕಾಂಗ್ರೆಸ್‌ ಸರ್ಕಾರ ವಿದ್ಯುತ್‌ ದರ ಹೆಚ್ಚಳ ಮಾಡಿದೆ. ಒಂದು ಕಡೆ ಉಚಿತವಾಗಿ ವಿದ್ಯುತ್‌ ಕೊಡುತ್ತೇವೆ ಎಂದು ಜನರಿಗೆ ಮಂಕು ಬೂದಿ ಎರಚುತ್ತಿದ್ದಾರೆ. ಇದನ್ನೊಂದು ಕಡೆ ದರ ಹೆಚ್ಚಳ ಮಾಡಿದ್ದಾರೆ. ಉಚಿತವಾಗಿ ಕೊಡುವ ವಿದ್ಯುತ್‌ಗೆ ದರ ಹೆಚ್ಚಳ ಮಾಡಲು ಅವಶ್ಯಕತೆ ಏನಿದೆ?ಗಿರೀಶ್‌ ಪಟೇಲ್‌, ಬಿಜೆಪಿ ವಿಭಾಗ ಪ್ರಭಾರಿ

Shimoga BJP protest against Power Price Hike

ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು ಉಚಿತ, ಖಚಿತ ಎನ್ನುತ್ತಿದ್ದರು. ಈಗ ಯಾವುದೂ ಉಚಿತವಿಲ್ಲ. ಇವರದ್ದು ವಚನಭ್ರಷ್ಟ ಸರ್ಕಾರ.ಜೋತಿ ಪ್ರಕಾಶ್‌, ಸೂಡಾ ಮಾಜಿ ಅಧ್ಯಕ್ಷ

ಬಿಜೆಪಿ ನಗರಾಧ್ಯಕ್ಷ ಜಗದೀಶ್‌, ಪ್ರಮುಖರಾದ ಆರ್.ಸಿದ್ದರಾಮಣ್ಣ, ಮಾಲತೇಶ, ರಾಮು, ರಂಗಪ್ಪ, ದಿನೇಶ್‌, ಸುರೇಖಾ ಮುರಳೀಧರ್‌, ಪದ್ಮಿನಿ, ವಿನ್ಸಂಟ್‌, ಶರತ್‌ ಕಲ್ಯಾಣಿ, ದಿನೇಶ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ‘ಕಾರು, ಬೈಕ್‌ ಬದಲು ಮಕ್ಕಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿʼ, ಸಾಹಿತಿ ಜಯಂತ್‌ ಕಾಯ್ಕಿಣಿ ಅಭಿಮತ, ಕಾರಣವೇನು?

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 5, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment