SHIVAMOGGA LIVE | 10 JUNE 2023 | Fatafat News
ನೂತನ ಉಸ್ತುವಾರಿ ಸಚಿವರಿಗೆ ಕಿಮ್ಮನೆ ಅಭಿನಂದನೆ
BENGALURU : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್. ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಕೆಲವು ಹೊತ್ತು ಸಚಿವ ಮಧು ಬಂಗಾರಪ್ಪ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಚರ್ಚೆ ನಡೆಸಿದರು.
ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು
AYANUR : ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಪ್ರಕರಣದ ಹಿನ್ನೆಲೆ 112 ಇಆರ್ಎಸ್ ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಆದೇಶಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯೆ ನಡೆದೆ ಆರೋಪವಿದೆ. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
14 ಕೆಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ
SHIMOGA : ಜೂ.12 ರಿಂದ 19ರವರೆಗೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. 3,523 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಲು 200 ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿ. ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಶಿವಮೊಗ್ಗ ನಗರಕ್ಕೆ 25 ಸಾರಿಗೆ ಬಸ್ ಒದಗಿಸಿ
SHIMOGA : ಜೆ ನರ್ಮ್ ಯೋಜನೆ ಅಡಿ ಶಿವಮೊಗ್ಗ ನಗರದಲ್ಲಿ 25 ನಗರ ಸಾರಿಗೆ ಸರ್ಕಾರಿ ಬಸ್ಸುಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿತು. ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಸೇರಿದಂತೆ ಹಲವರು ಇದ್ದರು.
ಕಾಂತರಾಜ್ ಆಯೋಗದ ವರದಿ ಜಾರಿಯಾಗಲಿ
SHIMOGA : ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು 2013-14ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸ್ಥಿತಿಗತಿ ಕುರಿತು ನಡೆಸಿದ್ದ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬೇಕು. ಅದನ್ನು ಜಾರಿ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಶಿವಮೊಗ್ಗ ಘಟಕದ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಎರಡು ದಿನ ನೀರು ಪೂರೈಕೆ ವ್ಯತ್ಯಯ
SHIMOGA : ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ವ್ಯತ್ಯಯ ಹಿನ್ನೆಲೆ ನಗರದಲ್ಲಿ ಎರಡು ದಿನ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ. ಜೂ.11 ಮತ್ತು 12ರಂದು ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿಗಳ ಜೊತೆ ಸಿನಿಮಾ ವೀಕ್ಷಿಸಿದ ಎಂಎಲ್ಎ
SHIMOGA : ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ವಿದ್ಯಾರ್ಥಿಗಳಿಗಾಗಿ ದಿ ಕೇರಳ ಸ್ಟೋರಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿದ್ಯಾರ್ಥಿಗಳೊಂದಿಗೆ ಸಿನಿಮಾ ವೀಕ್ಷಿಸಿದರು.
ಸೋಮಿನಕೊಪ್ಪದಲ್ಲಿ ಮಾದರಿ ಶಾಲೆ ಉದ್ಘಾಟನೆ
SHIMOGA : ಸೋಮನಕೊಪ್ಪದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ ನಿರ್ಮಿಸಲಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಶಾಲೆಯನ್ನು ಉದ್ಘಾಟಿಸಿದರು. ಪಾಲಿಕೆ ಸದಸ್ಯೆ ಆಶಾ ಚಂದ್ರಪ್ಪ, ಪ್ರಮುಖರಾದ ಚಂದ್ರಪ್ಪ, ರಾಜು, ಗಣೇಶ್, ವಸಂತ ಕುಮಾರ್ ಸೇರಿದಂತೆ ಹಲವರು ಇದ್ದರು.
ಕನಸಿನಕಟ್ಟೆ ಗ್ರಾಮಸ್ಥರಿಂದ ಪ್ರತಿಭಟನೆ
SHIMOGA : ಮೂಲ ಸೌಕರ್ಯಕ್ಕೆ ಆಗ್ರಹಿಸಿ ಭದ್ರಾವತಿ ತಾಲೂಕು ಕನಸಿನಕಟ್ಟೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸಮರ್ಪಕ ಬಸ್ ಸೌಕರ್ಯವಿಲ್ಲ, ಸ್ಮಶಾನದ ಜಾಗಕ್ಕೆ ವ್ಯಕ್ತಿಯೊಬ್ಬರು ಪಹಣಿ ಮಾಡಿಸಿಕೊಂಡಿದ್ದಾರೆ, ಮೊಬೈಲ್ ನೆಟ್ವರ್ಕ್ ಸಮಸ್ಯೆ, ಇದರಿಂದಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿ ಪಡಿತರ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಈಚೆಗೆ ನಡೆದ ವಿಧಾನಸಭೆ ಚುನಾವಣೆಯನ್ನೂ ಬಹಿಷ್ಕರಿಸಿ ಗ್ರಾಮಸ್ಥರು ಹೋರಾಟ ಮಾಡಿದ್ದರು.
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಗಾಂಧಿನಗರದಲ್ಲಿ ಮಾಂಗಲ್ಯ ಸರ ಕದ್ದವನು ಅರೆಸ್ಟ್
SHIMOGA : ಗಾಂಧಿ ನಗರದ 3ನೇ ಅಡ್ಡರಸ್ತೆಯಲ್ಲಿ ಮನೆಯಲ್ಲಿ ಇಟ್ಟಿದ್ದ ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವುಲೆಯ ಚೇತನ್ (32) ಬಂಧಿತ. ಈತನಿಂದ 3.40 ಲಕ್ಷ ರೂ. ಮೌಲ್ಯದ 68 ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಕ್ಕೆ ಪಡೆಯಲಾಗಿದೆ. ಇನ್ಸ್ಪೆಕ್ಟರ್ ಮಾದಪ್ಪ, ಎಎಸ್ಐ ಕರಿಬಸಪ್ಪ, ಸಿಬ್ಬಂದಿ ಆದರ್ಶ, ರೋಷನ್, ರವಿಕಿರಣ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200