ಶಿವಮೊಗ್ಗ ನಗರದ ಈವರೆಗಿನ 10 ಪ್ರಮುಖ ಸುದ್ದಿ | 15 ಜೂನ್‌ 2023

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 15 JUNE 2023 | FATAFAT NEWS

ಶಿವಮೊಗ್ಗ ಮೆಸ್ಕಾಂ ಕಚೇರಿಗೆ ಕಲ್ಲು ತೂರಾಟ

BJP-Worker-pelt-stones-on-MESCOM-office-in-Shimoga.

SHIMOGA : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ FATAFAT NEWS 1 jpgವತಿಯಿಂದ ರೈಲ್ವೆ ನಿಲ್ದಾಣದ ಬಳಿ ಇರುವ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ ಮತ್ತು ನೊಟೀಸ್‌ ಬೋರ್ಡ್‌ನ ಗಾಜುಗಳಿಗೆ ಕಲ್ಲು ತೂರಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಶಾಸಕ ಚನ್ನಬಸಪ್ಪ, ಮೇಯರ್‌ ಶಿವಕುಮಾರ್‌ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ – ಶಿವಮೊಗ್ಗ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು, MLA ಸೇರಿ ಹಲವರು ವಶಕ್ಕೆ

ವಿದ್ಯುತ್‌ ದರ ಹೆಚ್ಚಳಕ್ಕೆ ಆಕ್ರೋಶ

BJP-Protest-against-Power-Price-Hike-in-Shimoga-city

SHIMOGA : ಉಚಿತವಾಗಿ ವಿದ್ಯುತ್‌ ಕೊಡುತ್ತೇವೆ ಎಂದು ಭರವಸೆ FATAFAT NEWS 2 jpgನೀಡಿದ್ದ ಸರ್ಕಾರ ಪ್ರತಿ ಯುನಿಟ್‌ ವಿದ್ಯುತ್‌ ದರವನ್ನು ಹೆಚ್ಚಳ ಮಾಡಿದೆ. ಇದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ರೈಲ್ವೆ ನಿಲ್ದಾಣದ ಬಳಿ ಇರುವ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಶಾಸಕರಾದ ಎಸ್‌.ಎನ್.ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್‌ ಸೇರಿದಂತೆ ಹಲವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ವಿದ್ಯುತ್‌ ದರ ಹೆಚ್ಚಳ, ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನಾ ಸಭೆ, MLA ಹೇಳಿದ್ದೇನು? ಉಳಿದವರ ಆರೋಪಗಳೇನು?

ಕಲ್ಲು ಹೊಡೆಯೋದು ತಪ್ಪು, ನೇತೃತ್ವ ವಹಿಸಿದವರನ್ನು ಬಂಧಿಸಲಿ

SHIMOGA : ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ FATAFAT NEWS 3 jpgಮಾಡಿದ್ದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಅಧಿಕಾರವಧಿಯಲ್ಲಿ ಎಲ್ಲದರ ಬೆಲೆ ಹೆಚ್ಚಳ ಮಾಡಿದ್ದಾರೆ. ವಿರೋಧ ಪಕ್ಷವಾಗಿ ಹೋರಾಟ ನಡೆಸಲು ಅವಕಾಶವಿದೆ. ಆದರೆ ಕಲ್ಲು ಹೊಡೆಯುವುದು ತಪ್ಪು. ಪ್ರತಿಭಟನೆಯ ನೇತೃತ್ವ ವಹಿಸಿದ್ದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ನೂತನ ಅಂಗನವಾಡಿ ಉದ್ಘಾಟನೆ

Anganavadi Inauguration at KR Puram in Shimoga

KR PURAM : ನೂತನ ಅಂಗನವಾಡಿ ಕಟ್ಟಡವನ್ನು ಶಾಸಕ FATAFAT NEWS 4 jpgಎಸ್‌.ಎನ್.ಚನ್ನಬಸಪ್ಪ ಉದ್ಘಾಟಿಸಿದರು. ಇದೆ ವೇಳೆ ಕರ್ನಾಟಕ ಪಬ್ಲಿಕ್‌ ಶಾಲೆಯ ನೂತನ ಕೊಠಡಿಗಳ ಗುದ್ದಲಿ ಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ಮೇಯರ್‌ ಶಿವಕುಮಾರ್‌, ಪಾಲಿಕೆ ಸದಸ್ಯೆ ಸುನಿತಾ ಅಣ್ಣಪ್ಪ ಸೇರಿದಂತೆ ಹಲವರು ಇದ್ದರು.

ನೆಹರು ರಸ್ತೆ ವರ್ತಕರ ಸಂಘಕ್ಕೆ ಚಾಲನೆ

Shimoga Nehru Road Varthakara Sanga

NEHRU ROAD : ನೆಹರು ರಸ್ತೆ ವರ್ತಕರ ಸಂಘಕ್ಕೆ ಶಾಸಕ FATAFAT NEWS 5 jpgಎಸ್‌.ಎನ್.ಚನ್ನಬಸಪ್ಪ ಅವರು ಚಾಲನೆ ನೀಡಿದರು. ಇಲ್ಲಿನ ಪವನ್‌ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘವನ್ನು ಉದ್ಘಾಟಿಸಲಾಯಿತು. ಇದೆ ವೇಳೆ ಶಾಸಕ ಚನ್ನಬಸಪ್ಪ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಗೋಪಿನಾಥ್, ಪಾಲಿಕೆ ಸದಸ್ಯೆ ಮೀನಾ ಗೋವಿಂದರಾಜ್, ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.

ಪುರಲೆ, ಹರಿಗೆ ಕೆರೆಗಳ ಕಾಲುವೆ ಕಾಮಗಾರಿ ಪರಿಶೀಲನೆ

Harige kere canal work

SHIMOGA : ಮಳೆಗಾಲದಲ್ಲಿ ಪುರಲೆ ಕೆರೆ ಮತ್ತು ಹರಿಗೆ ಕೆರೆ ಕೋಡಿ FATAFAT NEWS 6 jpgಬಿದ್ದು ಅಕ್ಕಪಕ್ಕದ ಬಡಾವಣೆಗಳಿಗೆ ನೀರು ನುಗ್ಗುತ್ತದೆ. ಇದನ್ನ ತಡೆಯಲು ಕಾಲುವೆ ಕಾಮಗಾರಿ ನಡೆಸಲಾಗುತ್ತಿದೆ. ಶಾಸಕ ಚನ್ನಬಸಪ್ಪ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಕಾಮಗಾರಿ ಕುರಿತು ಮಾಹಿತಿ ಪಡೆದರು. ಮೇಯರ್‌ ಶಿವಕುಮಾರ್‌, ಪಾಲಿಕೆ ಸದಸ್ಯ ಲಕ್ಷ್ಮಣ್‌, ಮಾಜಿ ಸದಸ್ಯ ಮೋಹನ್‌ ರೆಡ್ಡಿ ಸೇರಿದಂತೆ ಹಲವರು ಇದ್ದರು.

ಆರ್ಯ ಈಡಿಗ ವಿದ್ಯಾರ್ಥಿ ನಿಲಯ ಉದ್ಘಾಟನೆ

MLA Beluru Gopalakrishna and Dr Ramappa inaugurates Arya Ediga Hostel

BAPUJI NAGAR : ಶಿವಮೊಗ್ಗದ ಬಾಪೂಜಿ ನಗರದಲ್ಲಿ ಆರ್ಯ ಈಡಿಗ FATAFAT NEWS 7 jpgಬಾಲಕರ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ.ರಾಮಪ್ಪ ಮತ್ತು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿದರು.

WhatsApp%20Image%202023 06 14%20at%201.58.15%20PM

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಡಿ.ಹೆಚ್.ಶಂಕರಮೂರ್ತಿಗೆ ನಾಗರಿಕ ಅಭಿನಂದನೆ

DH Shankaramurthy Abhinandane

SHIMOGA : ಶಿವಮೊಗ್ಗ ಸಿಟಿಜನ್ ಫೋರಂ ವತಿಯಿಂದ ವಿಧಾನ FATAFAT NEWS 8 jpgಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿರವರಿಗೆ ಜೂ.20ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಾಗರಿಕ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಫೋರಂ ಅಧ್ಯಕ್ಷ ಹಾಗೂ ವಕೀಲ ಕೆ. ಬಸಪ್ಪ ಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಾನ್ನಿಧ್ಯ ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.

‘ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳೋಣʼ

SDPI Youth Summit in Shivamogga

SHIMOGA : ಬೈಪಾಸ್‌ ರಸ್ತೆಯಲ್ಲಿರುವ ಕ್ರೌನ್‌ ಪ್ಯಾಲೆಸ್‌ನಲ್ಲಿ ಎಸ್‌ಡಿಪಿಐ FATAFAT NEWS 9 jpgಸಂಘಟನೆಯ ಕಾರ್ಯಕರ್ತರ ಸಮಾವೇಶ ನಡೆಯಿತು. ಮುಖ್ಯ ಭಾಷಣ ಮಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ, ವಿಧಾನಸಭೆ ಚುನಾವಣೆಯಲ್ಲಿ 16 ಕ್ಷೇತ್ರಗಳಲ್ಲಿ ಒಟ್ಟು 1 ಲಕ್ಷ ಮತಗಳು ಬಂದಿವೆ. ಇದು ನಮ್ಮ ಸಂಘಟನೆಗೆ ಸ್ಥೈರ್ಯ ತುಂಬಿದೆ ಎಂದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್‌ ಫರಂಗಿಪೇಟೆ ಮಾತನಾಡಿ, ಪಕ್ಷದ ಕಾರ್ಯಕರ್ತರು ಎದೆಗುಂದದೆ ಮುಂದಿನ ಚುನಾವಣೆಗಳಲ್ಲಿ ಕೆಲಸ ನಿರ್ವಹಿಸಲು ಸಿದ್ಧರಾಗಬೇಕು ಎಂದರು. ಜಿಲ್ಲಾಧ್ಯಕ್ಷ ಇಮ್ರಾನ್‌, ಉಪಾಧ್ಯಕ್ಷ ದೇವೇಂದ್ರ ಪಾಟೀಲ್‌, ಪಾಲಿಕೆ ಸದಸ್ಯೆ ಶಬಾನಾ ಖಾನಂ ಸೇರಿ ಹಲವರು ಇದ್ದರು.

ಟೆಂಪೊ ಟ್ರಾವೆಲ್ಲರ್‌ ಮ್ಯೂಸಿಕ್‌ ಸಿಸ್ಟಮ್‌ ಕಳ್ಳತನ

SHIMOGA : ನಗರದ ಸರ್ಕ್ಯೂಟ್‌ ಹೌಸ್‌ ಸಮೀಪ ಫುಟ್‌ ಪಾತ್‌ ಬಳಿ FATAFAT NEWS 10 jpgನಿಲ್ಲಿಸಿದ್ದ ಟೆಂಪೋ ಟ್ರಾವಲರ್‌ ಗಾಜಿನ ಕಿಟಕಿಯ ಲಾಕ್‌ ಮುರಿದು ಮ್ಯೂಸಿಕ್‌ ಸಿಸ್ಟಮ್‌ ಕಳ್ಳತನ ಮಾಡಲಾಗಿದೆ. ಸುರೇಶ್‌ ಎಂಬುವವರಿಗೆ ಸೇರಿದ ವಾಹನದಲ್ಲಿ ಕಳ್ಳತನವಾಗಿದೆ. ಪ್ರವಾಸ ಮುಗಿಸಿ ರಾತ್ರಿ ಟೆಂಪೊ ಟ್ರಾವೆಲರನ್ನು ತಂದು ನಿಲ್ಲಿಸಿ, ಸಹೋದರಿಯ ಮನೆಗೆ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. 20 ಸಾವಿರ ರೂ. ಮೌಲ್ಯದ ಮ್ಯೂಸಿಕ್‌ ಸಿಸ್ಟಮ್‌ ಕಳ್ಳತನವಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga Live Editor Nitin Kaidotlu

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 15, 2023

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment