SHIVAMOGGA LIVE | 16 JUNE 2023
SHIMOGA : ರಾಷ್ಟ್ರೀಯ ಶಿಕ್ಷಣ ಸಮಿತಿಯ (National Education Society) ಅಮೃತ ಮಹೋತ್ಸವದ ಅಂಗವಾಗಿ ಜೂ.20 ಮತ್ತು 21ರಂದು ಎನ್‌ಇಎಸ್ ಹಬ್ಬ ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ, ವಸ್ತು ಪ್ರದರ್ಶನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್, ವ್ಯಕ್ತಿ ಬೆಳೆದಂತೆ ದುರ್ಬಲನಾಗುತ್ತಾನೆ. ಆದರೆ ವಯಸ್ಸಾದಂತೆ ಸಂಸ್ಥೆಗಳು ದೃಢವಾಗುತ್ತವೆ. ಅದೆ ರೀತಿ ಎನ್‌ಇಎಸ್ ಸಂಸ್ಥೆ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ ಎಂದರು.
![]() |
ಏನೇನೆಲ್ಲ ಕಾರ್ಯಕ್ರಮ ಇರಲಿದೆ?
ಎನ್‌ಇಎಸ್ ಹಬ್ಬದ (National Education Society) ಉದ್ಘಾಟನಾ ಸಮಾರಂಭವು ಜೂ.20ರಂದು ಬೆಳಗ್ಗೆ 10 ಗಂಟೆಗೆ ಎನ್‌ಇಎಸ್ ಮೈದಾನದಲ್ಲಿ ನಡೆಯಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಹಾಸ್ಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಇದನ್ನೂ ಓದಿ – ಸಂಸದ ರಾಘವೇಂದ್ರ ಸೇರಿ ಹಲವರು ವಶಕ್ಕೆ | ಚಾರ್ಲಿಗಾಗಿ ಬಹುಮಾನ | ಶಿವಮೊಗ್ಗ ನಗರದ 10 ಫಟಾಫಟ್ ಸುದ್ದಿ
ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಸಂದರ್ಭ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಅವರನ್ನು ಸನ್ಮಾನಿಸಲಾಗುತ್ತದೆ. ನಟ ವಸಿಷ್ಠ ಸಿಂಹ ಅವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿರುತ್ತಾರೆ.
ಜೂ.21ರಂದು ಬೆಳಗ್ಗೆ 10ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಅಮೃತ ನಡಿಗೆ, ಯೋಗ
ಗ್ರಾಮೀಣ ಭಾಗಕ್ಕೆ ಅಧುನಿಕ ಶಿಕ್ಷಣ
ಉಪಾಧ್ಯಕ್ಷ ಸಿ.ಆರ್.ನಾಗರಾಜ್, ಡಿ.ಜಿ.ರಮೇಶ್, ಅಶ್ವತ್ಥ ನಾರಾಯಣ ಶೆಟ್ಟಿ, ಜಿ.ಎನ್.ಸುಧೀರ್, ಶಿವಕುಮಾರ್, ರಾಮಚಂದ್ರ ಮೂರ್ತಿ, ಅನಂತ ದತ್ತ, ಸೀತಾಲಕ್ಷ್ಮಿ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಅಧಿಕಾರಿ ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ನೃಪತುಂಗ ಸುದ್ದಿಗೋಷ್ಠಿಯಲ್ಲಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200