ತುಂಗಾ ನದಿಗೆ ಇಳಿದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

NES-EDUCATION-INSTITUTION

SHIVAMOGGA LIVE | 18 JUNE 2023

THIRTHAHALLI : ತುಂಗಾ ನದಿಯಲ್ಲಿ (Tunga River) ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

THIRTHAHALLI-BREAKING-NEWS

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ (Tunga River) ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಮನೆಯಲ್ಲಿ ಇಂಜಿನಿಯರ್‌ ಪತ್ನಿಯ ಮೃತದೇಹ, ಪೊಲೀಸ್‌, ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ದೌಡು

ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment