ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 18 JUNE 2023
AGUMBE : ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಗುಂಬೆ ಘಾಟಿಯಲ್ಲಿ (Agumbe Ghat) ಘಟನೆ ಸಂಭವಿಸಿದೆ.

ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಶಶಾಂಕ್ ಮೃತ ಯುವಕ. ನಿರ್ಮಿತಾ ಎಂಬಾಕೆಗೆ ಗಂಭೀರ ಗಾಯವಾಗಿದೆ.
ಹೇಗಾಯ್ತು ಅಪಘಾತ?
ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಶಶಾಂಕ್ ಮತ್ತು ನಿರ್ಮಿತಾ ಕೆಟಿಎಂ ಬೈಕಿನಲ್ಲಿ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಆಗುಂಬೆ ಘಾಟಿಯ (Agumbe Ghat) 12ನೇ ತಿರುವಿನಲ್ಲಿ ಅಪಘಾತವಾಗಿದೆ. ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ತುಂಗಾ ನದಿಗೆ ಇಳಿದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆ

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





