ಇಂಜಿನಿಯರ್‌ ಪತ್ನಿ ಹತ್ಯೆ ಕೇಸ್‌, ಮನೆಯಲ್ಲಿದ್ದ 35 ಲಕ್ಷ ರೂ. ಹಣ ಮಿಸ್ಸಿಂಗ್‌, ಒಬ್ಬನ ಮೇಲೆ ಅನುಮಾನ, ಯಾರದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 20 JUNE 2023

SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಂಟಿ ಮಹಿಳೆಯ ಹತ್ಯೆ ಪ್ರಕರಣ ಸಂಬಂಧ ಕಾರು ಚಾಲಕನ (Driver) ವಿರುದ್ಧ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ದಿನದಿಂದ ಆತ ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇತ್ತ ಆರೋಪಿಗಳ ಬಂಧನಕ್ಕೆ ಮೂರು ತಂಡ ರಚಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Kamalamma-Killed-in-Vijayanagara-in-Shimoga

ಏನಾಗಿತ್ತು?

ಶಿವಮೊಗ್ಗದ ವಿಜಯನಗರದ 2ನೇ ಅಡ್ಡರಸ್ತೆಯ ಮನೆಯೊಂದರಲ್ಲಿ ಕಮಲಾ (50) ಎಂಬುವವರ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿತ್ತು. ಕಮಲಾ ಅವರ ಪತಿ ಅಪ್ಪರ್‌ ಭದ್ರಾ ಯೋಜನೆ ಕಾರ್ಯಪಾಲಕ ಇಂಜಿನಿಯರ್‌ ಕೆ.ವಿ.ಮಲ್ಲಿಕಾರ್ಜುನ ಅವರು ಸ್ನೇಹಿತರ ಜೊತೆಗೆ ಗೋವಾಗೆ ತೆರಳಿದ್ದಾಗ ಘಟನೆ ಸಂಭವಿಸಿತ್ತು. ಹಲವು ಬಾರಿ ಕರೆ ಮಾಡಿದರು ಪತ್ನಿ ಕರೆ ಸ್ವೀಕರಿಸದ ಹಿನ್ನೆಲೆ ಮಲ್ಲಿಕಾರ್ಜುನ ಅವರು ಎದುರು ಮನೆಯಲ್ಲಿರುವ ಪರಿಚಿತರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಎದುರು ಮನೆಯವರು ಮಲ್ಲಿಕಾರ್ಜುನ ಅವರ ಮನೆಗೆ ಹೋದಾಗ ಕಮಲಾ ಅವರು ಅಡುಗೆ ಮನೆಯಲ್ಲಿ ಬಿದ್ದಿದ್ದು, ಮೂಗಿನಿಂದ ರಕ್ತ ಬರುತ್ತಿರುವುದನ್ನು ಗಮನಸಿದ್ದರು.

PARISHRAMA NEET ACADEMY SHIVAMOGGA LIVE

ಕಾರು ಚಾಲಕನ ಮೇಲೆ ಶಂಕೆ

ಮಲ್ಲಿಕಾರ್ಜುನ ಅವರ ಮನೆಯಲ್ಲಿ ಕಳೆದ ಕೆಲವು ತಿಂಗಳಿಂದ ಯುವಕನೊಬ್ಬ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮಲ್ಲಿಕಾರ್ಜುನ ಅವರು ಗೋವಾಗೆ ತಮ್ಮ ಕಾರಿನಲ್ಲಿ ತೆರಳಬೇಕಿದ್ದು, ಕಾರು ಚಲಾಯಿಸಲು ಬಾ ಎಂದು ಕರೆದಾಗ ಆತ ಬರಲು ಒಪ್ಪಿರಲಿಲ್ಲ. ಧರ್ಮಸ್ಥಳಕ್ಕೆ ತೆರಳಬೇಕಿದೆ ಎಂದು ತಿಳಿಸಿ ತನ್ನ ಪರಿಚಿತ ಮತ್ತೊಬ್ಬ ಚಾಲಕನನ್ನು ಕಳುಹಿಸಿದ್ದ. ಮಲ್ಲಿಕಾರ್ಜುನ ಅವರು ಗೋವಾಗೆ ತೆರಳಿದ ಬಳಿಕ ರಾತ್ರಿ 11 ಗಂಟೆ ಹೊತ್ತಿಗೆ ಚಾಲಕ ಮನೆ ಬಳಿ ಬಂದಿದ್ದ. 5 ಸಾವಿರ ರೂ.ಹಣ ನೀಡುವಂತೆ ಕೇಳಿದ್ದ. ಕಮಲಾ ಅವರು ಪತಿಗೆ ಕರೆ ಮಾಡಿದ್ದು, ಚಾಲಕನ ಜೊತೆಗೆ ಮಲ್ಲಿಕಾರ್ಜನ ಅವರು ಮಾತನಾಡಿ ಬೆಳಗ್ಗೆ ಬರುವಂತೆ ತಿಳಿಸಿದ್ದರು.

ಇದನ್ನೂ ಓದಿ – ಮಹಿಳೆಯರೆ ಹುಷಾರ್‌, ಇವರ ಮುಂದಿನ ಟಾರ್ಗೆಟ್‌ ನೀವೆ, ಶಿವಮೊಗ್ಗದಲ್ಲೂ 3 ಕೇಸ್‌ ದಾಖಲು

ಮರುದಿನವೆ ನಡೆಯಿತು ಹತ್ಯೆ

ಜೂ.17ರಂದು ಬೆಳಗ್ಗೆ ಮಲ್ಲಿಕಾರ್ಜುನ ಅವರು ಪತ್ನಿ ಕಮಲಾ ಅವರಿಗೆ ಕರೆ ಮಾಡಿ ಮಾತನಾಡಿದ್ದರು. ರಾತ್ರಿ ಕರೆ ಮಾಡಿದಾಗ ಪತ್ನಿ ಕರೆ ಸ್ವೀಕರಿಸಲಿಲ್ಲ. ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಮಗನಿಗೆ ಕರೆ ಮಾಡಿದಾಗಲೂ ತಾಯಿ ಕರೆ ಸ್ವೀಕರಿಸಲಿಲ್ಲ ಎಂದು ತಿಳಿಸಿದ್ದರು. ಈ ಹಿನ್ನೆಲೆ ಎದುರು ಮನೆಯವರಿಗೆ ಮಲ್ಲಿಕಾರ್ಜನ ಅವರು ಕರೆ ಮಾಡಿದ್ದು, ಅವರು ಪರಿಶೀಲಿಸಲು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

Police-Jeep-With-Light-New.

ಲಕ್ಷ ಲಕ್ಷ ಹಣವಿಲ್ಲ, ಡ್ರೈವರ್‌ ಸುಳಿವಿಲ್ಲ

ವಿಚಾರ ತಿಳಿದು ಮಲ್ಲಿಕಾರ್ಜುನ ಅವರು ಗೋವಾದಿಂದ ವಾಪಸಾಗಿದ್ದಾರೆ. ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಕಬೋರ್ಡ್‌ನಲ್ಲಿ ಇಟ್ಟಿದ್ದ 35 ಲಕ್ಷ ರೂ. ಹಣ ನಾಪತ್ತೆಯಾಗಿತ್ತು. ಇನ್ನು, ಕಾರು ಚಾಲಕನ (Driver) ಸುಳಿವಿಲ್ಲದಾಗಿದೆ. ಆತನ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿದೆ. ಈ ಹಿನ್ನೆಲೆ ಆತನೆ ಕೃತ್ಯ ಎಸಗಿರಬಹುದು ಎಂದು ಮಲ್ಲಿಕಾರ್ಜುನ ಅವರು ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ – ಫೇಸ್‌ಬುಕ್‌ನಲ್ಲಿ ಜಾಹೀರಾತು, ಫೋನಿನಲ್ಲಿ ಬಣ್ಣ ಬಣ್ಣದ ಮಾತು, ನಂಬಿದ ಶಿವಮೊಗ್ಗದ ವ್ಯಕ್ತಿಗೆ ಆಘಾತ ಕಾದಿತ್ತು, ಏನಿದು?

ಇತ್ತ ಪೊಲೀಸರು ಆರೋಪಿಗಳ ಪತ್ತೆಗೆ ಮೂರು ಪ್ರತ್ಯೇಕ ತಂಡ ರಚಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment