SHIMOGA : ಮಳೆ ಹಾನಿ ತಡೆಗಟ್ಟುವುದು, ಮುನ್ನೆಚ್ಚರಿಕೆ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆಯಲು ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳ ಸಭೆ (Meeting) ನಡೆಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ 3 ಪ್ರಮುಖ ಸೂಚನೆ ನೀಡಿದರು.
ಏನದು ಮೂರು ಸೂಚನೆ
1ಸರ್ಕಾರಿ ಕಚೇರಿಗಳಲ್ಲಿ ಕೆಲಸ ಆಗುತ್ತಿಲ್ಲ ಎಂದು ಸಾರ್ವಜನಿಕರು ಶಾಸಕರ ಬಳಿ ಬರುವಂತಿರಬಾರದು. ಕಚೇರಿಗೆ ಬಂದ ಜನರಿಗೆ ಕಾರಣ ಹೇಳಿ ಕಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲ. ತಿಂಗಳುಗಟ್ಟಲೆ ಸಮಸ್ಯೆ ಪರಿಹಾರವಾಗಿಲ್ಲ ಎಂದು ಜನರು ನನ್ನ ಬಳಿ ಬರುತ್ತಿದ್ದಾರೆ. ಇದು ತಪ್ಪಬೇಕು.
2ನಗರದಲ್ಲಿ ನಾಗರಿಕರಿಗೆ ಅನುಕೂಲ ಆಗುವ ಹಾಗೆ ಕೆಲಸ ಮಾಡೋಣ. ಹೇಗೋ ಮ್ಯಾನೇಜ್ ಮಾಡಿದರಾಯಿತು ಅನ್ನಲು ಅಧಿಕಾರಿಗಳು ಮ್ಯಾನೇಜರ್ಗಳಲ್ಲ. ಅಧಿಕಾರಿಗಳು ಯಾವುದೆ ಕಾರಣ ಹೇಳದೆ ಜನರ ಸಮಸ್ಯೆಗೆ ಪರಿಹಾರ ಹುಡುಕಬೇಕು ಎಂದು ಸೂಚಿಸಿದರು.
3ಇಲಾಖೆಗಳ ಮಧ್ಯೆ ಸಮನ್ವಯ ಇದ್ದರೆ ಜನರ ಕೆಲಸಗಳು ಸುಲಭವಾಗಿ ನಡೆಯಲಿದೆ. ಕೆಲವು ಸಿಬ್ಬಂದಿಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಕಪ್ಪು ಚುಕ್ಕೆ ತರುವ ಅಧಿಕಾರಿಗಳ ವಿರುದ್ಧ ನಿಗಾ ಇರಲಿ. ಸಮಸ್ಯೆಯನ್ನು ಇನ್ನೊಬ್ಬರ ಮೇಲೆ ಹಾಕುವುದರಿಂದ ಪ್ರಯೋಜನವಿಲ್ಲ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ