ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 23 JUNE 2023
THIRTHAHALLI : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮನೆಯೊಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದರು. ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಇಬ್ಬರು ಯುವಕರನ್ನು ಬಂಧಿಸಲಾಗಿದೆ.
ತೀರ್ಥಹಳ್ಳಿ ಪಟ್ಟಣದಲ್ಲಿ ದಾಳಿ ನಡೆಸಿದ ಪೊಲೀಸರು ಕಮ್ಮರಡಿಯ ಜೆ.ಪಿ.ನಗರ ನಿವಾಸಿ ಪ್ರಶಾಂತ್.ಕೆ.ಎಸ್ (33) ಮತ್ತು ಮೇಲಿನ ಕುರುವಳ್ಳಿಯ ಮಂಜುನಾಥ.ಎಂ (37) ಎಂಬುವನನ್ನು ಬಂಧಿಸಲಾಗಿದೆ.
ಮೂವರು ಮಹಿಳೆಯರ ರಕ್ಷಣೆ
ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಪೊಲೀಸರು ದಾಳಿ (Police Raid) ನಡೆಸಿದ್ದರು. ಮನೆಯಲ್ಲಿ ಮೂವರು ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅವರನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ – ಅಪ್ರಾಪ್ತನಿಗೆ ಬೈಕ್ ಕೊಟ್ಟ ಮಾಲೀಕನಿಗೆ ಎದುರಾಯ್ತು ಸಂಕಷ್ಟ, ಏನಾಯ್ತು?
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತೀರ್ಥಹಳ್ಳಿ ಇನ್ಸ್‌ಪೆಕ್ಟರ್ ಅಶ್ವಥಗೌಡ, ಪಿಎಸ್‌ಐ ಸಾಗರ್ ಅತ್ತರವಾಲ, ಪಿಎಸ್‌ಐ ಗಾದಿಲಿಂಗಪ್ಪ ಗೌಡರ್, ಪೊಲೀಸ್ ಸಿಬ್ಬಂದಿ, ಮಹಿಳಾ ಸಾಂತ್ವನ ಕೇಂದ್ರದ ಕಿರಣ್ ಕುಮಾರಿ ದಾಳಿಯಲ್ಲಿ ಭಾಗವಹಿಸಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422