ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದ ವಿನೋಬನಗರದಲ್ಲಿ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ದಾಳಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 25 JUNE 2023

SHIMOGA : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ವಿನೋಬನಗರ ಸ್ಪಾ (Spa) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸಂತ್ರಸ್ತ ಯುವತಿಯರ ರಕ್ಷಣೆ ಮಾಡಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Police-Van-Jeep-at-Shimoga-Nehru-Road

ವಿನೋಬನಗರದಲ್ಲಿರುವ ದಿ ಅರ್ಬನ್‌ ಸ್ಪಾ (Spa) ಮೇಲೆ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಬಿಂದು ಮಣಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಲ್ಲಿದ್ದ ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ

ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ದಾಖಲೆಗಳು ಲಭ್ಯವಾಗಿದೆ. ಮಾಲೀಕರ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌

ಏಳು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment