GOOD NEWS – ಶಿವಮೊಗ್ಗದಿಂದ 4 ಹೊಸ ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ, ಯಾವ್ಯಾವ ಮಾರ್ಗಗಳು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 29 JUNE 2023

SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ದಿನಾಂಕ ನಿಗದಿಯಾಗಿದೆ. ಈ ಮಧ್ಯೆ ಉಡಾನ್‌ ಯೋಜನೆ ಅಡಿ ಶಿವಮೊಗ್ಗದಿಂದ ಇನ್ನೂ ನಾಲ್ಕು ಮಾರ್ಗದಲ್ಲಿ (4 new route) ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

MP-BY-raghavendra-about-Shimoga-Airport-Flight

ಆಗಸ್ಟ್‌ 11ರಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಶಿವಮೊಗ್ಗ – ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಶುರುವಾಗಲಿದೆ. ಈ ಸಂಬಂಧ ಇಂಡಿಗೋ ಸಂಸ್ಥೆ ಈಗಾಗಲೇ ಒಪ್ಪಂದ ಮಾಡಿಕೊಂಡಿದ್ದು, ವಿಮಾನ ಹಾರಾಟಕ್ಕೆ ಸಿದ್ಧತೆ ನಡೆಸುತ್ತಿದೆ. ಇನ್ನೊಂದೆಡೆ ನಾಲ್ಕು ಹೊಸ ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಒಪ್ಪಿಗೆ ಸಿಕ್ಕಿದೆ‌.

ನಾನ್ ರೀಜನಲ್ ಕನೆಕ್ಟಿವಿಟಿ ಸ್ಕೀಮ್ ಅಡಿಯಲ್ಲಿ ನಾಲ್ಕು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ‌. 11 ಮಾರ್ಗವನ್ನು ಪರಿಗಣಿಸುವಂತೆ ವಿಮಾನಯಾನ ಸಚಿವಾಲಯಕ್ಕೆ ಮನವಿ ಮಾಡಿದ್ದೆ. ಈಗ ನಾಲ್ಕು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ಲಭಿಸಿದೆ.ಬಿ.ವೈ.ರಾಘವೇಂದ್ರ, ಸಂಸದ

ಇನ್ನೂ 4 ಮಾರ್ಗಕ್ಕೆ ಅನುಮತಿ

ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ವಿಮಾನ ಹಾರಾಟ ಶುರು ಮಾಡುವ ಮೊದಲೆ ಕೇಂದ್ರ ಸರ್ಕಾರ ಇನ್ನೂ ನಾಲ್ಕು ಮಾರ್ಗಗಳಿಗೆ ಅನಮತಿ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ರೂಟ್ 1 – ಹೈದರಾಬಾದ್ – ಶಿವಮೊಗ್ಗ – ಗೋವಾ – ಶಿವಮೊಗ್ಗ – ತಿರುಪತಿ – ಶಿವಮೊಗ್ಗ – ಹೈದರಾಬಾದ್

ರೂಟ್ 2 – ಹೈದರಾಬಾದ್ – ಶಿವಮೊಗ್ಗ – ದೆಹಲಿ – ಶಿವಮೊಗ್ಗ – ಚೆನ್ನೈ – ಶಿವಮೊಗ್ಗ – ಬೆಂಗಳೂರು – ಶಿವಮೊಗ್ಗ – ಹೈದರಾಬಾದ್

ರೂಟ್ 3 – ಹೈದರಾಬಾದ್ – ಶಿವಮೊಗ್ಗ – ಹೈದರಾಬಾದ್

ರೂಟ್ 4 – ಬೆಂಗಳೂರು – ಸೇಲಂ – ಕೊಚ್ಚಿನ್ – ಸೇಲಂ – ಬೆಂಗಳೂರು – ಶಿವಮೊಗ್ಗ – ಬೆಂಗಳೂರು

ಉಡಾನ್‌ 5.0 ಯೋಜನೆಯಲ್ಲಿ ಮಾರ್ಗ

ಶಿವಮೊಗ್ಗ ವಿಮಾನ ನಿಲ್ದಾಣವು ಉಡಾನ್‌ 5.0 ಯೋಜನೆ ಅಡಿಯಲ್ಲಿ ಬರಲಿದೆ. ಇದೆ ಯೋಜನೆ ಅಡಿ ಹೊಸದಾಗಿ ನಾಲ್ಕು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿದೆ. ಸದ್ಯಕ್ಕೆ ಫಿಕ್ಸೆಡ್‌ ವಿಂಗ್ಸ್‌ ವಿಮಾನಗಳಿಗೆ ಮಾತ್ರ ಈ ಮಾರ್ಗದಲ್ಲಿ ಹಾರಾಟಕ್ಕೆ ಅನುಮತಿ ನೀಡಲಾಗಿದೆ.

ಈ ಮೊದಲು 600 ಕಿ.ಮೀ.ವರೆಗೆ ವಿಮಾನ ಹಾರಾಟ ನಡೆಸಬೇಕು ಎಂಬ ಮಿತಿ ಇತ್ತು. ಈಗ ಆ ನಿಯಮ ತೆಗೆಯಲಾಗಿದೆ. ವಿಮಾನಯಾನ ಸಂಸ್ಥೆಗಳಿಗೆ ಸಬ್ಸಿಡಿ ಸೇರಿದಂತೆ ಅನೇಕ ಅವಕಾಶ ಕಲ್ಪಿಸಲಾಗಿದೆ. ಹೊಸ ಮಾರ್ಗದಲ್ಲಿ ವಿಮಾನ ಸೇವೆ ಒದಗಿಸಲು ಸಂಸ್ಥೆಗಳು ಬಿಡ್ ಕರೆಯಲಾಗಿದೆ. ಆಗಸ್ಟ್ ಕೊನೆಯಲ್ಲಿ ಯಾವ ವಿಮಾನ ಸಂಸ್ಥೆಗಳು ಮುಂದೆ ಬರುತ್ತಾರೋ ಅವರಿಗೆ ಬಿಡ್ ಸಿಗಲಿದೆ.ಬಿ.ವೈ.ರಾಘವೇಂದ್ರ, ಸಂಸದ

ಇದನ್ನೂ ಓದಿ – ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್‌ ಇನ್

ಸದ್ಯ ಶಿವಮೊಗ್ಗ ವಿಮಾನ ನಿಲ್ದಾಣದ ಬಗ್ಗೆ ಜನರಲ್ಲಿ ಪುನಃ ಕುತೂಹಲ ಮೊಳಕೆಯೊಡೆದಿದೆ. ದೇಶದ ನಾನಾ ಭಾಗಕ್ಕೆ ಇಲ್ಲಿಂದ ವಿಮಾನಯಾನ ಸೇವೆ ಆರಂಭವಾಗುತ್ತಿರುವುದು ಜನರ ನಿರೀಕ್ಷೆ ಹೆಚ್ಚಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment