ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 28 JUNE 2023
SHIMOGA : ವಿದ್ಯುತ್ ತಂತಿ ತಗುಲಿ (Electric Shock) ಇಬ್ಬರು ಕಟ್ಟಡ ಕಾರ್ಮಿಕರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇಲ್ಲಿನ ಡಾ. ಅಂಬೇಡ್ಕರ್ ಭವನದ ಮುಂಭಾಗ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹೇಗಾಯ್ತು ಘಟನೆ?
ತಗಡಿನ ಶೀಟ್‌ಗಳನ್ನು ನಿರ್ಮಾಣ ಹಂತದ ಕಟ್ಟಡದ ಮೇಲ್ಭಾಗಕ್ಕೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ವಿದ್ಯುತ್ ಕಂಬಿಗಳಿಗೆ ತಗಡಿನ ಶೀಟ್ ತಗುಲಿದೆ ಎಂದು ಹೇಳಲಾಗುತ್ತಿದೆ. ವಿದ್ಯುತ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಅಸುನೀಗಿದ್ದಾರೆ. ವಿದ್ಯುತ್ ಕಂಬಿಗಳು ಕಟ್ಟಡಕ್ಕೆ ತೀರ ಸಮೀಪದಲ್ಲಿದೆ. ಹಾಗಾಗಿ ಶೀಟ್ ಮೇಲೆತ್ತುವಾಗ ಕಂಬಿಗಳಿಗೆ ತಗುಲಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಮದುವೆ ಮನೆಯಲ್ಲಿ ಸೂತಕದ ಛಾಯೆ, ಮರುಗಿದ ಜನತೆ, ಆಗಿದ್ದೇನು?
ವಿದ್ಯುತ್ ಶಾಕ್‌ಗೆ (Electric Shock) ಒಳಗಾಗಿದ್ದ ಕಾರ್ಮಿಕರನ್ನು ಕೂಡಲೆ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗಾಗಲೆ ಇಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದರು. ಮೃತರ ಪೈಕಿ ಒಬ್ಬಾತನ ಗುರುತು ಪತ್ತೆಯಾಗಿದ್ದು ಗುಂಟೂರು ಮೂಲದ ಸೋಮಶೇಖರ್ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಟಿಪ್ಪು ನಗರ, ದ್ರೌಪದಮ್ಮ ಸರ್ಕಲ್‌ನಲ್ಲಿ ಪ್ರತ್ಯೇಕ ಹಲ್ಲೆ ಕೇಸ್, ಈವರೆಗೂ 10 ಮಂದಿ ಅರೆಸ್ಟ್
ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.