ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 28 JUNE 2023
SHIMOGA : ಸುಳ್ಳು ಭರವಸೆಗಳನ್ನು ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಜುಲೈ 3ರಂದು ಉಪವಾಸ ಸತ್ಯಾಗ್ರಹ (Satyagraha) ನಡೆಸುವುದಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಘೋಷಿಸಿದ್ದಾರೆ. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹ (Satyagraha) ನಡೆಸಲು ತೀರ್ಮಾನಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, 9 ವರ್ಷದ ಹಿಂದೆ ಬಿಜೆಪಿ ಹಲವು ಭರವಸೆ ನೀಡಿತ್ತು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಣ ಹಾಕುತ್ತೇವೆ ಎಂದಿದ್ದರು. ಈ ಭರವಸೆಗಳನ್ನು ಈಡೇರಿಸದೆ ಇರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ ಕೊರತೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕಡಿಮೆಯಾಗಿದೆ? ಕೃಷಿಕರ ಪರಿಸ್ಥಿತಿ ಹೇಗಿದೆ?
ನರೇಂದ್ರ ಮೋದಿ ಅವರ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿತ್ತು. ಅದರಂತೆ 9 ವರ್ಷದಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ಉದ್ಯೋಗ ಕೊಡುವುದಿರಲಿ, ಇರುವ ಉದ್ಯೋಗಗಳನ್ನೆ ಕಸಿದುಕೊಂಡಿದೆ. 15 ಲಕ್ಷ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡದಿರುವ ಕುರಿತು ಪ್ರಶ್ನಿಸಿದರೆ, ಬಿಜೆಪಿಯವರು ಮೋದಿ ಅವರೇನು ಗ್ಯಾರಂಟಿ ಬರೆದುಕೊಟ್ಟಿದ್ದರೇ ಎಂದು ಪ್ರಶ್ನಿಸುತ್ತಿದ್ದಾರೆ. ಬಿಜೆಪಿಯವರು ಮೊದಲು ಎಲ್ಲರ ಖಾತೆಗೆ 15 ಲಕ್ಷ ರೂ. ಜಮಾ ಮಾಡಲಿ. ಆ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಚರ್ಚೆ ನಡೆಸಲಿ ಎಂದು ಕಿಮ್ಮನೆ ರತ್ನಾಕರ್ ಸವಾಲು ಹಾಕಿದರು.
ಪ್ರಮುಖರಾದ ಆರ್.ಪ್ರಸನ್ನ ಕುಮಾರ್, ಎನ್.ರಮೇಶ್, ಕಲೀಂ ಪಾಷಾ, ವಿಶ್ವನಾಥ ಕಾಶಿ, ಇಕ್ಕೇರಿ ರಮೇಶ್, ಮಧುಸೂದನ್, ಚೇತನ್ ಸೇರಿದಂತೆ ಹಲವರು ಇದ್ದರು.