ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ

SHIVAMOGGA LIVE | 29 JUNE 2023

SHIMOGA : ಬಕ್ರೀದ್‌ (Bakrid) ಹಬ್ಬದ ಹಿನ್ನೆಲೆ ಮುಸ್ಲಿಂ ಸಮುದಾಯದವರು ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ – ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್‌ ಇನ್

ಮುಸ್ಲಿಂ ಧರ್ಮ ಗುರುಗಳು ದೇವರ ಸಂದೇಶವನ್ನು ತಿಳಿಸಿದರು. ಮುಸ್ಲಿಂ ಸಮುದಾಯದ ಹಲವು ಮುಖಂಡರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ಸಾಮೂಹಿಕ ಪಾರ್ಥನೆ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಸವಳಂಗ ರಸ್ತೆ, ತಿಲಕನಗರ, ದುರ್ಗಿಗುಡಿ ರಸ್ತೆಯಲ್ಲಿಯು ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment