ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 3 JULY 2023
SHIMOGA : ಜೆಡಿಎಸ್ನ ಶಾಸಕಾಂಗ ಪಕ್ಷದ (Legislative Party) ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಆಯ್ಕೆಯಾಗಿದ್ದಾರೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಸಭೆ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಒಲಿದ ಮಹತ್ವದ ಜವಾಬ್ದಾರಿ
ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಜೆಡಿಎಸ್ ಪಕ್ಷ ಮಹತ್ವದ ಜವಾಬ್ದಾರಿ ವಹಿಸಿದೆ. ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ (Legislative Party) ನಾಯಕ, ಉಪ ನಾಯಕ ಹುದ್ದೆ ಅತ್ಯಂತ ಮಹತ್ವದ್ದು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಈ ಜವಾಬ್ದಾರಿ ವಹಿಸಿರುವುದು ಅವರ ಬೆಂಬಲಿಗರು, ಜೆಡಿಎಸ್ ಕಾರ್ಯಕರ್ತರಿಗೆ ಖುಷಿ ಉಂಟು ಮಾಡಿದೆ.
ಸಚಿವ ಸ್ಥಾನ ಲಭಿಸಬೇಕಿತ್ತು
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಸರ್ಕಾರ ರಚನೆ ಮಾಡಿದ್ದರೆ, ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ಸಚಿವರಾಗುತ್ತಿದ್ದರು. ಮಹತ್ವದ ಖಾತೆಯು ಅವರ ಹೆಗಲಿರುತ್ತಿತ್ತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭ ಸಚಿವ ಸ್ಥಾನ ನೀಡುವ ಭರವಸೆ ನ ನೀಡಿದ್ದರು. ಈಗ ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ ಉಪ ನಾಯಕಿ ಸ್ಥಾನ ಲಭಿಸಿರುವುದು ಮಧ್ಯ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಿದೆ.
ಇದನ್ನೂ ಓದಿ – ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ