ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 JULY 2023
SHIMOGA : ರಾಜ್ಯಾದ್ಯಂತ ಮುಂಗಾರು ಚುರುಕಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ (Alert) ಘೋಷಿಸಿದೆ.

ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್
ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ (Alert) ಘೋಷಿಸಿದೆ. ಜು.5 ಮತ್ತು 6ರಂದು ಈ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ 115 ಮಿ.ಮೀ.ನಿಂದ 204 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜು.7 ಮತ್ತು 8ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಲ್ಲೂ ಅಲರ್ಟ್ ವೇಳೆ 64 ಮಿ.ಮೀ.ನಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಂಭವವಿದೆ. ಗುಡುಗು, ಮಿಂಚ, ಜೋರು ಗಾಳಿ ಸಹಿತ ಮಳೆಯಲಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಬೆಳಗ್ಗೆಯಿಂದಲೆ ಮಳೆ ಆರಂಭ
ಜಿಲ್ಲೆಯ ವಿವಿಧೆಡೆ ಬೆಳೆಗ್ಗೆಯಿಂದ ಮಳೆ ಆರಂಭವಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಶಿಕಾರಿಪುರ ತಾಲೂಕಿನ ಹಲವು ಕಡೆ ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ ತಾಲೂಕು ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 0.5 ಮಿ.ಮೀ, ಸಾಗರದ ಕಾಂಡಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 0.5 ಮಿ.ಮೀ, ಶಿಕಾರಿಪುರದ ತಡಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 0.5 ಮಿ.ಮೀ ಮಳೆಯಾಗಿದೆ. ಇನ್ನು, ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆದಿದೆ.
ಇದನ್ನೂ ಓದಿ – ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






