ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 4 JULY 2023
SHIMOGA : ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 11.76 ಮಿ.ಮೀ ಮಳೆಯಾಗಿದೆ (Rain Report). ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮತ್ತು ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಲ್ಲಿ ಕಡಿಮೆ ಮಳೆಯಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ಶಿವಮೊಗ್ಗ ತಾಲೂಕಿನಲ್ಲಿ 2.20 ಮಿ.ಮೀ, ಭದ್ರಾವತಿಯಲ್ಲಿ 6.40 ಮಿ.ಮೀ, ತೀರ್ಥಹಳ್ಳಿಯಲ್ಲಿ 17.20 ಮಿ.ಮೀ, ಸಾಗರದಲ್ಲಿ 33.60 ಮಿ.ಮೀ, ಶಿಕಾರಿಪುರದಲ್ಲಿ 2 ಮಿ.ಮೀ, ಸೊರಬದಲ್ಲಿ 6 ಮಿ.ಮೀ, ಹೊಸನಗರದಲ್ಲಿ 14.90 ಮಿ.ಮೀ ಮಳೆಯಾಗಿದೆ (Rain Report).
ವಾಡಿಕೆಗಿಂತ ಬಹಳ ಕಡಿಮೆ ಮಳೆ
ಮುಂಗಾರು ಬಿರುಸು ಪಡೆಯದ ಹಿನ್ನೆಲೆ ವಾಡಿಕೆಗಿಂತಲೂ ಅತಿ ಕಡಿಮೆ ಪ್ರಮಾಣದ ಮಳೆಯಾಗಿದೆ. ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ ವಾಡಿಕೆ ಮಳೆ 687.87 ಮಿ.ಮೀ. ಆಗಬೇಕು. ಆದರೆ ಈತನಕ ಕೇವಲ 44.57 ಮಿ.ಮೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಇನ್ಮುಂದೆ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಟ್ಟ ಮೋಡ ಕವಿದಿದ್ದು ಅಲ್ಲಲ್ಲಿ ಮಳೆ (Rain Report) ಸುರಿಯುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್, ಇನ್ನೆರಡು ದಿನ ಯಲ್ಲೋ ಅಲರ್ಟ್
ಬೆಳಗ್ಗೆಯಿಂದ ಹಲವೆಡೆ ಮಳೆ
ಇನ್ನೆರಡು ದಿನ ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಸಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಹಲವೆಡೆ ಉತ್ತಮ ಮಳೆಯಾಗುತ್ತಿರುವುದಾಗಿ ವರದಿಯಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






