ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 6 JULY 2023
SHIMOGA : ಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ (Youth Congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನೋಬನಗರದಲ್ಲಿ ಇರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಯುವ ಕಾಂಗ್ರೆಸಿಗರ ಆರೋಪಗಳೇನು?
ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸುತ್ತಿದೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಜಿಎಸ್‌ಟಿ ಸೇರಿದಂತೆ ವಿವಿಧ ಅನುದಾನ ನೀಡುತ್ತಿಲ್ಲ. ರಾಜ್ಯದ ವಿರುದ್ಧ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಲೋಕಸಭೆ ಚುನಾವಣೆ ಸಂದರ್ಭ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿಲ್ಲ. ಈ ಬಗ್ಗೆ ರಾಜ್ಯದ 25 ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಜೊತೆಗೆ ಮಾತನಾಡುತ್ತಿಲ್ಲ ಎಂದು ಯುವ ಕಾಂಗ್ರೆಸ್ (Youth Congress) ಕಾರ್ಯಕರ್ತರು ಆರೋಪಿಸಿದರು.
ಇದನ್ನೂ ಓದಿ – ಮಾಜಿ ಸಚಿವರ ಪುತ್ರಿ, ಮಾಜಿ ಜಿಲ್ಲಾಧ್ಯಕ್ಷ ಸೇರಿ 13 ಮಂದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ, ಕಾರಣವೇನು?
ಸಂಸದರ ಮನೆಗೆ ಮುತ್ತಿಗೆ ಯತ್ನ
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಸಂಸದರ ಮನೆಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದರು. ಇದನ್ನು ದಾಟಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮುನ್ನುಗಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ನೂಕಾಟ ತಳ್ಳಾಟ ಉಂಟಾಯಿತು. ಬಳಿಕ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಉತ್ತರ ಬ್ಲಾಕ್ ಅಧ್ಯಕ್ಷ ಬಿ.ಲೋಕೇಶ್, ಈ.ಟಿ.ನಿತಿನ್, ಕುಮರೇಶ್, ಪೂರ್ಣೇಶ್, ಮಸ್ತಾನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





