SHIVAMOGGA LIVE | 7 JULY 2023
SHIMOGA : ದ್ವಿಚಕ್ರ ವಾಹನ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಸವಾರನ (Bike Rider) ಎರಡು ಕಾಲಿಗೆ ಗಂಭೀರ ಗಾಯವಾಗಿದೆ. ಸ್ಥಳೀಯರ ನೆರವಿನೊಂದಿಗೆ ಆಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹೊನ್ನಾಳಿ ಫ್ಲೈಓವರ್ ಕೆಳಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸ್ ಬಸ್ ಅಡಿಗೆ ಬೈಕ್ ಸಿಲುಸಿತ್ತು. ಸವಾರ ಖಲೀದ್ ಪಾಷಾ ಅವರ ಕಾಲಿನ ಮೇಲೆ ಬಸ್ಸಿನ ಚಕ್ರಗಳು ಹತ್ತಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಕೂಡ್ಲಿಗೆರೆಯಲ್ಲಿ ವ್ಯಕ್ತಿ ಮೇಲೆ ಹರಿದ ಖಾಸಗಿ ಶಾಲೆ ಬಸ್
ಸ್ಥಳಕ್ಕೆ ಆಗಮಿಸಿದ 108 ಆಂಬುಲೆನ್ಸ್ ವೈದ್ಯಕೀಯ ತಂತ್ರಜ್ಞ ಉಪೇಂದ್ರ, ಚಾಲಕ ಪುಟ್ಟಪ್ಪ ಗಾಯಾಳುವನ್ನು (Bike Rider) ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.