ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 7 JULY 2023
SHIMOGA : ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್ ಚಾಲನೆ (Driving) ಮಾಡುತ್ತಿದ್ದ ಚಾಲಕನಿಗೆ ಸಂಚಾರ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಚಾಲಕ ಮೊಬೈಲ್‌ನಲ್ಲಿ ಮಾತನಾಡುವ ವಿಡಿಯೋವನ್ನು ಪ್ರಯಾಣಿಕರೊಬ್ಬರು ಚಿತ್ರೀಕರಣ ಮಾಡಿದ್ದರು.
ಖಾಸಗಿ ಬಸ್ ಚಾಲಕ ಮನ್ಸೂರ್ ಅಲಿ ಎಂಬಾತ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡಿದ್ದ. ಪ್ರಯಾಣಿಕರೊಬ್ಬರು ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ, ಸಂಚಾರ ಠಾಣೆ ಪೊಲೀಸರಿಗೆ ರವಾನಿಸಿ ಕ್ರಮಕ್ಕೆ ಆಗ್ರಹಿಸಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್ ಸವಾರನ ಕಾಲುಗಳ ಮೇಲೆ ಹರಿದ KSRTC ಬಸ್
ಪರಿಶೀಲನೆ ನಡೆಸಿದ ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಅವರು ಚಾಲಕನನ್ನು ಪತ್ತೆ ಹಚ್ಚಿ 5 ಸಾವಿರ ರೂ. ದಂಡ ವಿಧಿಸಿದ್ದಾರೆ.