ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 8 JULY 2023
SHIMOGA : ಯಶವಂತಪುರ – ಶಿವಮೊಗ್ಗ ರೈಲಿಗೆ (Train) ಸಿಲುಕಿ ಯುವಕನೊಬ್ಬನ ಕಾಲು ತುಂಡಾಗಿದೆ. ಶಿವಮೊಗ್ಗದ ಮಹಾದೇವಿ ಟಾಕೀಸ್ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ.

ನಾಗರಾಜ್ ಎಂಬಾತನ ಬಲಗಾಲು ತುಂಡಾಗಿದೆ. ಯಶವಂತಪುರ – ಶಿವಮೊಗ್ಗ ರೈಲಿನಲ್ಲಿ ನಾಗರಾಜ್ ಶಿವಮೊಗ್ಗಕ್ಕೆ ಆಗಮಿಸಿದ್ದ. ಅದೇ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡಿದ್ದಾನೆ. ರೈಲು (Train) ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಜನರು ನಾಗರಾಜನನ್ನು ರಕ್ಷಿಸಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜು.9ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ನಾಗರಾಜ್ ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವನು ಎಂದು ತಿಳಿದು ಬಂದಿದೆ. ಕಡುರಿನಲ್ಲಿರುವ ಪೊಲೀಸ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ.

LATEST NEWS
- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

About The Editor
ನಿತಿನ್ ಆರ್.ಕೈದೊಟ್ಲು















