SHIVAMOGGA LIVE | 10 JULY 2023
SHIKARIPURA : ಗೋ ಹತ್ಯೆ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ನಡೆದ ಸ್ವಯಂ ಪ್ರೇರಿತ ಬಂದ್ (Bandh) ಯಶಸ್ವಿಯಾಗಿದೆ. ವರ್ತಕರು ಅಂಗಡಿಗಳನ್ನು ಬಂದ್ ಮಾಡಿ, ಹಿಂದೂ ಜನಜಾಗೃತಿ ಜಾಥಾಗೆ ಬೆಂಬಲ ವ್ಯಕ್ತಪಡಿಸಿದರು.
ಪಟ್ಟಣ ಸಂಪೂರ್ಣ ಸ್ಥಬ್ಧ
ಹಿಂದೂ ಜಾಗರಣಾ ವೇದಿಕೆ, ಆರ್.ಎಸ್.ಎಸ್ ಮತ್ತು ಹಿಂದೂ ಸಂಘಟನೆಗಳ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಹಿಂದೂ ಜಾನಜಾಗೃತಿ ಜಾಥಾ ನಡೆಸಲಾಯಿತು. ಈ ಹಿನ್ನೆಲೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ (Bandh) ಮಾಡಿ ಜಾಥಾಗೆ ಬೆಂಬಲ ಸೂಚಿಸಿದರು. ಬಂದ್ ವೇಳೆ ಜನ, ವಾಹನ ಸಂಚಾರ ಕಡಿಮೆಯಾಗಿತ್ತು. ಬಸ್ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಎಂದಿನಂತೆ ಇತ್ತು.
ಪಟ್ಟಣದಲ್ಲಿ ಬೃಹತ್ ಜಾಥಾ
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ನೇತೃತ್ವದಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಜನಜಾಗೃತಿ ಜಾಥಾ ನಡೆಯಿತು. ದೊಡ್ಡ ಸಂಖ್ಯೆಯ ಹಿಂದೂ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಕೇಸರಿ ಶಾಲು ಧರಿಸಿ ಘೋಷಣೆಗಳನ್ನು ಕೂಗತ್ತ ಮೆರವಣಿಗೆಯಲ್ಲಿ ಸಾಗಿದರು. ಬಸ್ ನಿಲ್ದಾಣದಿಂದ ಸಾಂಸ್ಕೃತಿಕ ಭವನದವರೆಗೆ ಜಾಥಾ ನಡೆಯಿತು. ಗೋ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದ ಆಗ್ರಹಿಸಿದರು.
ಇದನ್ನೂ ಓದಿ – ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥ ಸಂಚಲನ | ಯುವಕನ ಕೈ, ಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜನ
ಹಲ್ಲೆಕೋರರ ವಿರುದ್ಧ ಕ್ರಮಕ್ಕೆ ಆಗ್ರಹ
ಜಾಥಾದ ಬಳಿಕ ಸಾಂಸ್ಕೃತಿಕ ಭವನದಲ್ಲಿ ಹಿಂದೂ ಜನಜಾಗೃತಿ ಸಭೆ ನಡೆಸಲಾಯಿತು. ಹಿಂದೂ ಜಾಗರಣಾ ವೇದಿಕೆ, ಆರ್.ಎಸ್.ಎಸ್ನ ಪ್ರಮುಖರು ಸಭೆಯಲ್ಲಿ ಭಾಷಣ ಮಾಡಿದರು.
ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ದೇವರಾಜ ಅರಳಿಹಳ್ಳಿ, ಆರ್ಎಸ್ಎಸ್ ಜಿಲ್ಲಾ ಕಾರ್ಯವಾಹ ಶ್ರೀಧರ್ ನಿಸರಾಣಿ, ವೇದಿಕೆ ಪ್ರಾಂತ ಸಹ ಸಂಚಾಲಕ ಸತೀಶ್ ದಾವಣಗೆರೆ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200