SHIVAMOGGA LIVE | 11 JULY 2023
ಜು.22ರಂದು ಕುವೆಂಪು ವಿವಿ ಘಟಿಕೋತ್ಸವ
SHANKARAGHATTA : ಜು.22ರದಂದು ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ (Convocation) ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ವಿವಿಯ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಘಟಿಕೋತ್ಸವ ಆಯೋಜಿಸಲಾಗಿದೆ. ತಿರುವನಂತಪುರಂನ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿಯ ಚಾನ್ಸಲರ್ ಡಾ. ಸುರೇಶ್.ಬಿ.ಎನ್ ಅವರು ಘಟಿಕೋತ್ಸವ (Convocation) ಭಾಷಣ ಮಾಡಲಿದ್ದಾರೆ ಎಂದು ವಿವಿಯ ಕುಲಸಚಿವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ಮಹಿಳೆ
ವೀರಭದ್ರೇಶ್ವರ ಜಯಂತ್ಯೋತ್ಸವದ ಸಂಕಲ್ಪ
SHIMOGA : ವೀರಶೈವ ಕಲ್ಯಾಣ ಮಂದಿರದ ಹಿಂಭಾಗ ಇರುವ ಚೌಕಿ ಮಠದಲ್ಲಿ ಮಂಗಳವಾರ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾ ಹಾಗೂ ತಾಲೂಕು ಘಟಕದ ಸಭೆ ನಡೆಸಲಾಯಿತು. ಸೆ.23 ರಂದು ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಕಲ್ಪ ನೆರವೇರಿಸಲಾಯಿತು. ಘಟಕದ ಜಿಲ್ಲಾ ಕೋಶಾಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾಧ್ಯಕ್ಷ ಶಿವರಾಜ್.ಬಿ, ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಎಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ವಾರದ್, ಸಹ ಕಾರ್ಯದರ್ಶಿ ದರ್ಶನ್, ತಾಲೂಕು ಅಧ್ಯಕ್ಷ ಧನರಾಜ್.ಬಿ.ಜೆ, ತಾಲೂಕು ಪ್ರಧಾನ ಕಾರ್ಯದರ್ಶಿ ರಾಜಶೇಖರ್, ರಮೇಶ್ ಎಂ, ಗಂಗಾಧರ್, ಪರಮೇಶ್ವರ್, ಮಲ್ಲಿಕಾರ್ಜುನ್, ಆನಂದ, ಮಧು ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ – ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥ ಸಂಚಲನ | ಯುವಕನ ಕೈ, ಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜನ
ಶಿವಮೊಗ್ಗದಲ್ಲಿ ಕರೋಕೆ ಹಾಡು ಕಾರ್ಯಕ್ರಮ
SHIMOGA : ನಟ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಜು.12ರಂದು ಸಂಜೆ 7 ಗಂಟೆಗೆ ಕರೋಕೆ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಉದಯೋನ್ಮುಖ ಗಾಯಕರು ಶಿವರಾಜ್ ಕುಮಾರ್ ಅವರ ಸಿನಿಮಾ ಗೀತೆಗಳನ್ನು ಮಾತ್ರ ಹಾಡಬೇಕು. ಶಿವಮೊಗ್ಗದ ಆರ್.ಟಿ.ಒ ಕಚೇರಿ ರಸ್ತೆಯಲ್ಲಿರುವ ಪ್ರೆಸ್ ಟ್ರಸ್ಟ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಆಸಕ್ತರು 9448612644 ಮೊಬೈಲ್ ನಂಬರ್ ಸಂಪರ್ಕಿಸಬಹುದು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200