SHIVAMOGGA LIVE | 11 JULY 2023
ಜೈನ ಮುನಿ ಹತ್ಯೆಯ ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
SHIMOGA : ಚಿಕ್ಕೋಡಿಯಲ್ಲಿ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜ್ ಅವರ ಹತ್ಯೆ ಖಂಡಿಸಿ ದಿಗಂಬರ ಜೈನ (Jains) ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಹತ್ಯೆ ಆರೋಪಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಹಿಂಸೆಯ ಪ್ರತಿಪಾದಕರಾದ ಜೈನ ಸಾಧುವನ್ನು ಹತ್ಯೆ ಮಾಡಿರುವುದು ಹೇಯ ಕೃತ್ಯ. ಪಾತಕಿಗಳ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂಘದ (Jains) ಅಧ್ಯಕ್ಷ ಪ್ರಭಾಕರ್ ಗೋಗಿ, ಕಾರ್ಯದರ್ಶಿ ವಿಶ್ವನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ಮಹಿಳೆ
ಮಹಿಳಾ ಕರಾಟೆ ತರಬೇತುದಾರರಿಗೆ ಗೌರವ ಧನ ಕೊಟ್ಟಿಲ್ಲ
SHIMOGA : ಮಹಿಳಾ ಕರಾಟೆ ತರಬೇತುದಾರರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಗೌರವಧನ ಪಾವತಿಸುತ್ತಿಲ್ಲ. ಬಾಕಿ ಇರುವ ಗೌರವ ಧನವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 2021 – 22ನೇ ಸಾಲಿನಲ್ಲಿ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಕರಾಟೆ ತರಬೇತಿ ನೀಡಿದ ತರಬೇತುದಾರರಿಗೆ, ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ಟ್ ವಸತಿ ಶಾಲೆಗಳಲ್ಲಿನ ತರಬೇತುದಾರರಿಗೆ ಗೌರವ ಧನ ನೀಡಿಲ್ಲ. ಇದರಿಂದ ಕರಾಟೆ ತರಬೇತುದಾರರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೆ ಹಣ ಬಿಡುಗಡೆ ಮಾಡುವಂತೆ ಜಿಲ್ಲಾ ಮಹಿಳಾ ತರಬೇತುದಾರರ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಒತ್ತಾಯಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕುಸಿತ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?
ಬೀದಿಗಿಳಿದ ಬಿಸಿ ಊಟ ನೌಕರರು, ಬೇಡಿಕೆ ಈಡೇರಿಕೆಗೆ ಒತ್ತಾಯ
SHIMOGA : ಬಿಸಿ ಊಟ ನೌಕರರಿಗೆ ಹಿಂದಿನ ಸರ್ಕಾರ ಒಂದು ಸಾವಿರ ರೂ. ಗೌರವಧನ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು. ಈ ಕುರಿತು ಇನ್ನೂ ಆದೇಶ ಮಾಡಿಲ್ಲ. ಕೂಡಲೆ ಗೌರವ ಧನ ಹೆಚ್ಚಳದ ಆದೇಶ ಮಾಡಬೇಕು. ಮಾರ್ಗದರ್ಶಿ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು 4 ಗಂಟೆ ಬದಲಾಗಿ 6 ಗಂಟೆ ಎಂದು ತಿದ್ದುಪಡಿ ಮಾಡಬೇಕು. ನಿವೃತ್ತ ಮತ್ತು ನಿವೃತ್ತಿ ಹೊಂದುತ್ತಿರುವ ನೌಕರರಿಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತದಲ್ಲಿ ಮೃತರಾದ ನೌಕರರ ಕುಟುಂಬದವರಿಗೆ ಕೆಲಸ ಕೊಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ಜಿಲ್ಲಾ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200