ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್‌ ನಿಯೋಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 15 JULY 2023

SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್‌ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು.

ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen)  ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

ಏನೇನೆಲ್ಲ ಪರಿಶೀಲನೆ ನಡೆಸಿದರು?

ಇಂದಿರಾ ಕ್ಯಾಂಟೀನ್‌ ಆವರಣದಲ್ಲಿರುವ ಸ್ವಚ್ಛತೆ, ಉಪಕರಣಗಳು, ಪಾತ್ರೆಗಳು, ಬಾಗಿಲು, ಆಹಾರದ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಈ ಸಂದರ್ಭ ಹಲವು ನ್ಯೂನತೆ ಕಂಡು ಬಂದಿದ್ದು, ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಗರಂ ಆದರು. ಗುತ್ತಿಗೆದಾರರು, ಹಿಂದಿನ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್‌ನ ಬೋರ್ಡ್‌, ಬಾಗಿಲುಗಳು ಮುರಿದು ಹೋಗಿವೆ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲದಿರುವುದು ಗಮನಕ್ಕೆ ಬಂತು.

ಆಹಾರದ ಗುಣಮಟ್ಟ ಪರಿಶೀಲನೆ

ಗುಣಮಟ್ಟ ಪರೀಕ್ಷೆಗಾಗಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸುಂದರೇಶ್‌ ಮತ್ತು ಕೆಲವು ಕಾರ್ಯಕರ್ತರು ಕ್ಯಾಂಟೀನ್‌ನಲ್ಲಿ ಊಟ ಮಾಡಿದರು. ಮೊಸರನ್ನದಲ್ಲಿ ಮೊಸರಿನ ಬದಲು ನೀರು ಹಾಕಲಾಗಿದೆ ಎಂದು ಆರೋಪಿಸಿದರು.

ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌.ಎಸ್‌.ಸುಂದರೇಶ್‌ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.

ಎಲ್ಲರಿಗು ಹೊಟ್ಟೆ ತುಂಬ ಊಟ ಸಿಗಬೇಕು. ಕಡಿಮೆ ದರದಲ್ಲಿ ಊಟ, ತಿಂಡಿ ದೊರೆಯುವಂತೆ ಮಾಡಲು ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ನಂತರ ಬಂದ ಸರ್ಕಾರ ನಿರ್ವಹಣೆ ಮಾಡದೆ ತಿರಸ್ಕರಿಸಿತು. ಈಗ ಇಂದಿರಾ ಕ್ಯಾಂಟೀನ್‌ ಪುನಶ್ಚೇತನಕ್ಕೆ ಸರ್ಕಾರ 100 ಕೋಟಿ ರೂ. ಮೀಸಲಿಟ್ಟಿದೆ.

Congress-President-HS-Sundaresh-Visit-indira-Canteen

ಇಲ್ಲಿ ಗುಣಮಟ್ಟ ಮತ್ತು ಸರಿಯಾದ ಪ್ರಮಾಣದಲ್ಲಿ ಆಹಾರ ಸಿಗುತ್ತಿಲ್ಲ. ಸರಿಯಾಗಿ ನಿರ್ವಹಣೆ ಮಾಡದೆ ಕಟ್ಟಡಕ್ಕೆ ಹಾನಿಯಾಗಿದೆ. ಈ ಕುರಿತು ಪಾಲಿಕೆ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ನಿರ್ವಹಣೆಗಾಗಿ 12 ಲಕ್ಷ ರೂ. ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೊಂದು ವಾರದಲ್ಲಿ ರಿಪೇರಿಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

150723%20Indira%20Canteen%20at%20DDPI%20Office%20compund%20in%20Shimoga

ಇದನ್ನೂ ಓದಿ – ಶಿವಮೊಗ್ಗದ ಮೊದಲ ಇಂದಿರಾ ಕ್ಯಾಂಟೀನ್‌ ಈಗ ಹೇಗಿದೆ? ಊಟ, ತಿಂಡಿ ಸಿಕ್ತಿದ್ಯ? ಪ್ರತಿದಿನ ಎಷ್ಟು ಜನ ಬರ್ತಾರೆ?

ಗುಣಮಟ್ಟದ ಆಹಾರ ಸಿಗಬೇಕು ಎನ್ನುವುದು ನಮ್ಮ ಆಗ್ರಹ. ಸರ್ಕಾರದ ಯೋಜನೆ ಫಲಾನುಭವಿಗಳಿಗೆ ಸರಿಯಾಗಿ ತಲುಪಬೇಕು. ಈ ಕುರಿತು ಪ್ರತಿ ವಾರ ಪರಿಶೀಲನೆ ನಡೆಸುತ್ತೇವೆ. ಇಲ್ಲಿ ಕೆಲಸ ಮಾಡುವ ನೌಕರರಿಗೆ ಸರಿಯಾಗಿ ವೇತನ ಸಿಗುತ್ತಿಲ್ಲ ಸೇರಿದಂತೆ ಹಲವು ಸಮಸ್ಯೆಗಳು ಗಮನಕ್ಕೆ ಬಂದಿದೆ. ಈ ಕುರಿತು ಜಿಲ್ಲಾಧಿಕಾರಿ ಅವರು ಪರಿಶೀಲಿಸಬೇಕು ಎಂದು ಒತ್ತಾಯಿಸುತ್ತೇನೆ.

ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಈ ವೇಳೆ ಇದ್ದರು.‌

Modern Concretes

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2023

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

Leave a Comment