SHIMOGA : ನೂತನ ಶಾಸಕಿ ಮತ್ತು ವಿಧಾನಸಭೆಯ ಜೆಡಿಎಸ್ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಜೆಡಿಎಸ್ಪಕ್ಷದ ವತಿಯಿಂದ ಅಭಿನಂದನೆ (Felicitation) ಸಲ್ಲಿಸಲಾಯಿತು.
ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಪರವಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ಅಭಿನಂದನೆ (Felicitation) ಸಲ್ಲಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಭರವಸೆ ಇತ್ತು. ಆದರೆ ಒಂದು ಸ್ಥಾನ ಪಡೆದಿದ್ದೇವೆ. ಸೋತವರು ಧೃತಿಗೆಡುವಂತಿಲ್ಲ. ನಮ್ಮ ಬಳಿ ಬರುವ ಜನರ ಕೆಲಸವನ್ನು ಮಾಡಿಕೊಡಬೇಕಿದೆ. ಮುಂದೆ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರಬೇಕು.ಎಂ.ಶ್ರೀಕಾಂತ್, ಜೆಡಿಎಸ್ ಜಿಲ್ಲಾಧ್ಯಕ್ಷ
ಫಲಿತಾಂಶದ ಕುರಿತು ನಮ್ಮ ಕನಸು, ನಿರೀಕ್ಷೆ ಬೇರೆಯದ್ದೆ ಇತ್ತು. ಆದರೆ ಕುಮಾರಸ್ವಾಮಿಯವರ ಧೈರ್ಯ ಗಮನಿಸಿದರೆ ಸಮಾಧಾನವಾಯಿತು. ಸದನದಲ್ಲಿ ಕುಮಾರಸ್ವಾಮಿ ಅವರೆ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕ ಹಿರಿಯ ನಾಯಕರಿದ್ದರು ಉಪ ನಾಯಕಿ ಜವಾಬ್ದಾರಿ ವಹಿಸಿದ್ದಾರೆ. ಹಿರಿಯ ಮುಖಂಡರು ಕೂಡ ತಮ್ಮ ಸಹಕಾರವಿರಲಿದೆ ಎಂದು ತಿಳಿಸಿದ್ದಾರೆ.ಶಾರದಾ ಪೂರ್ಯಾನಾಯ್ಕ್, ಶಿವಮೊಗ್ಗ ಗ್ರಾಮಾಂತರ ಶಾಸಕಿ
ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. pic.twitter.com/3VTchVq4RY
ಶಾರದಾ ಪೂರ್ಯಾನಾಯ್ಕ್ ಅನುಭವಿ ರಾಜಕಾರಣಿ. ಜಿಲ್ಲಾ ಪಂಚಾಯಿತಿಯಲ್ಲಿ ಅಧ್ಯಕ್ಷರಾಗಿದ್ದವರು. ಸದನದಲ್ಲಿ ಇನ್ನು ಅವರು ಆರ್ಭಟಿಸಿಲ್ಲ. ಇನ್ಮುಂದೆ ಧ್ವನಿ ಎತ್ತಲಿದ್ದಾರೆ. ಈಗ ಅವರು ಕೇವಲ ಗ್ರಾಮಾಂತರ ಕ್ಷೇತ್ರದ ಶಾಸಕಿಯಲ್ಲ. ರಾಜ್ಯದ ನಾಯಕಿ. ಶಿವಮೊಗ್ಗದಲ್ಲಿ ಕಾರ್ಯಕರ್ತರಿಗೆ ತೊಂದರೆಯಾದರೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು ನಮ್ಮನ್ನು ಪ್ರಶ್ನಿಸುತ್ತಾರೆ ಅನ್ನುವ ಭಾವನೆ ಅಧಿಕಾರಿಗಳಿಗೆ ಬರಬೇಕು.ಆಯನೂರು ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ
ಜಿಲ್ಲೆಯ ಪ್ರತಿ ಹಳ್ಳಿಯಲ್ಲು ಕಾರ್ಯಕರ್ತರಿದ್ದಾರೆ. ಶ್ರೀಕಾಂತ್ ಅವರು ಪಕ್ಷವನ್ನು ಬಲಿಷ್ಠವಾಗಿ ಕಟ್ಟಿದ್ದಾರೆ. ಹಿಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯನ್ನು ಕೈಗೆ ತೆಗೆದುಕೊಂಡಿದ್ದರು. ಈಗ ಇಡೀ ಜಿಲ್ಲೆಗೆ ಶಾರದಾ ಪೂರ್ಯನಾಯ್ಕ್ ಅವರೆ ನಮ್ಮ ಶಾಸಕರು. ಕಾನೂನಾತ್ಮಕವಾಗಿ ಯಾವುದೆ ಕೆಲಸಗಳಿದ್ದರು ಅವರ ನೇತೃತ್ವದಲ್ಲಿ ನಾವು ಮಾಡಿಸಿಕೊಡುತ್ತೇವೆ.ಕೆ.ಬಿ.ಪ್ರಸನ್ನ ಕುಮಾರ್, ಮಾಜಿ ಶಾಸಕ
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ