ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್‌’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್‌, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

PARISHRAMA NEET ACADEMY SHIVAMOGGA LIVE

SHIVAMOGGA LIVE | 18 JULY 2023

SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಕಪ್ಪು ಇನ್ನೋವಾ (Innova) ಕಾರಿನಲ್ಲಿ ಯುವತಿಯ ಕಿಡ್ನಾಪ್‌ ಪ್ರಕರಣ ಸುಖಾಂತ್ಯ ಕಂಡಿದೆ. ಪ್ರೀತಿಸಿ ಮದುವೆಯಾಗಿರುವ ಹುಡುಗನ ಜೊತೆ ತೆರಳಿದ್ದಾಗಿ ಯುವತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಇಬ್ಬರನ್ನು ಬಿಟ್ಟು ಕಳುಹಿಸಲಾಗಿದೆ.

ಏನಿದು ಕಿಡ್ನಾಪ್‌ ಕೇಸ್‌?

ಶಿವಮೊಗ್ಗದ ಬಡಾವಣೆಯೊಂದರ ಯುವತಿ ತನ್ನ ತಾಯಿಯೊಂದಿಗೆ ಸಾಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಇನ್ನೋವಾ ಕಾರಿನಲ್ಲಿ ಬಂದವರು ಯುವತಿಯನ್ನು ಅಪಹರಿಸಿದ್ದರು. ವಿಚಲಿತರಾದ ತಾಯಿ ಕೂಗಿಕೊಂಡಿದ್ದಾರೆ. ಹಾಗಾಗಿ ದೊಡ್ಡ ಸಂಖ್ಯೆಯ ಜನ ಜಮಾಯಿಸಿದ್ದರು. ತಾಯಿಗೆ ಧೈರ್ಯ ಹೇಳಿದ ಜನರು ದೊಡ್ಡಪೇಟೆ ಠಾಣೆಗೆ ಕಳುಹಿಸಿದ್ದರು. ಕೂಡಲೆ ಯುವತಿಯ ಕುಟುಂಬದವರು ದೊಡ್ಡಪೇಟೆ ಠಾಣೆಗೆ ಆಗಮಿಸಿ ಪೊಲೀಸರ ನೆರವು ಕೋರಿದ್ದರು.

KSRTC-Bus-Stand-in-Shimoga

ಹಿಂಬಾಲಿಸಿದ ಪೊಲೀಸರು

ಕಿಡ್ನಾಪ್‌ ವಿಚಾರ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಕಾರ್ಯಪ್ರವೃತ್ತರಾಗಿ ಸಿಸಿಟಿವಿಗಳ ಪರಿಶೀಲನೆ ನಡೆಸಿದರು. ಇನ್ನೋವಾ ಕಾರು ಕೊಪ್ಪ ಕಡೆಗೆ ತೆರಳುತ್ತಿರುವುದನ್ನು ಪತ್ತೆ ಹಚ್ಚಿ ಹಿಂಬಾಲಿಸಿದರು. ಕಾರಿನಲ್ಲಿದ್ದವರಿಗೆ ಪೊಲೀಸರು ಹಿಂಬಾಲಿಸುತ್ತಿರುವ ಅರಿವಾಗಿ ನೇರವಾಗಿ ಕೊಪ್ಪ ಪೊಲೀಸ್‌ ಠಾಣೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ‘ತಾವಿಬ್ಬರು ವಯಸ್ಕರು. ಪರಸ್ಪರ ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ರಿಜಿಸ್ಟರ್‌ ಮದುವೆಯಾಗಿರುವುದಾಗಿʼ ತಿಳಿಸಿದ್ದಾರೆ. ಕೊಪ್ಪ ಪೊಲೀಸರು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಈ ವಿಚಾರ ತಿಳಿಸಿದ್ದಾರೆ.

Ready%20Compund%20New2

ಸುಖಾಂತ್ಯ ಕಂಡ ಪ್ರಕರಣ

ರಿಜಿಸ್ಟರ್‌ ಮದುವೆಯಾಗಿರುವ ವಿಚಾರ ಪೋಷಕರಿಗೆ ಗೊತ್ತಿರಲಿಲ್ಲ. ಹಾಗಾಗಿ ಯುವತಿ ಇನ್ನೋವಾ (Innova) ಕಾರಿನಲ್ಲಿ ತೆರಳಿದ್ದನ್ನು ಕಿಡ್ನಾಪ್‌ ಎಂದುಕೊಂಡು ಪೊಲೀಸ್‌ ಠಾಣೆಗೆ ದೌಡಾಯಿಸಿದ್ದರು.

ಇದನ್ನೂ ಓದಿ – ಹೆದ್ದಾರಿಯಲ್ಲಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್

ಯುವತಿಯ ಮನೆ ಸಮೀಪದಲ್ಲಿ ಯುವಕ ಅಂಗಡಿ ತೆರೆದಿದ್ದ. ಅಲ್ಲಿಯೇ ಇಬ್ಬರ ಮಧ್ಯೆ ಪ್ರೀತಿ ಆರಂಭವಾಗಿದ್ದು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment