ಶಿವಮೊಗ್ಗ ಜಿಲ್ಲೆಯಲ್ಲಿ ಪುನರ್ವಸು ಮಳೆ ಅಬ್ಬರ, ಬುಡಮೇಲಾದ ಮರಗಳು, ಕರೆಂಟ್‌ ಕಟ್, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

PARISHRAMA NEET ACADEMY SHIVAMOGGA LIVE

SHIVAMOGGA LIVE | 19 JULY 2023

SHIMOGA : ಜಿಲ್ಲೆಯಾದ್ಯಂತ ಪುನರ್ವಸು ಮಳೆ ಅಬ್ಬರ ಜೋರಾಗಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗಿದೆ. ಇದರಿಂದ ಮರಗಳು ಧರೆಗುರುಳಿದ್ದು (Trees Uprooted), ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ.

Tree-Falls-in-Shimoga-thirthahalli-road-due-to-rain

ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯೆ ಕೆಲವು ಹೊತ್ತು ಮಳೆ ಸುರಿದು ಬಿಡುವು ನೀಡುತ್ತಿತ್ತು. ರಾತ್ರಿ ವೇಳೆ ಪುನಃ ವರುಣನ ಅಬ್ಬರ ಆರಂಭವಾಗಿದೆ. ನಗರದ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಇದರ ನಡುವೆ ಕೆಲವು ಬಡಾವಣೆಯಲ್ಲಿ ವಿದ್ಯುತ್‌ ವ್ಯತ್ಯಯವಾಗಿದೆ.

ಜಿಲ್ಲೆಯಾದ್ಯಂತ ಹೇಗಿದೆ ಪರಿಸ್ಥಿತಿ?

ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಜು.17ರಂದು 23.43 ಮಿ.ಮೀ, ಜು.18ರಂದು 31.50 ಮಿ.ಮೀ ಮಳೆಯಾಗಿದೆ. ಬುಧವಾರವು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗಿದೆ.

ಹೊಸನಗರದ ನಗರ, ತೀರ್ಥಹಳ್ಳಿಯ ಹೊನ್ನೆತಾಳು, ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ.

ತೀರ್ಥಹಳ್ಳಿಯ ತ್ರಯಂಬಕಪುರ, ಭಾಂಡ್ಯ ಕುಕ್ಕೆ, ಬೆಜ್ಜವಳ್ಳಿ, ಕುಡುಮಲ್ಲಿಗೆ, ಮಂಡಗದ್ದೆ, ಅರೆಹಳ್ಳಿ, ಆರಗ, ನೋಣಬೂರು, ಬಿದರಗೋಡು, ಹೊಸಹಳ್ಳಿ, ಹೊಸನಗರದ ಸುಳಗೋಡು, ಮುಂಬಾರು, ತ್ರಿಣಿವೆ, ಸಾಗರದ ಭೀಮನಕೋಣೆ, ಮಳವೆ, ಸೊರಬದ ನಿಸರಾಣಿ, ಇಂಡುವಳ್ಳಿ, ಮುಟುಗುಪ್ಪೆ, ಗುಡುವಿ, ಬೆನ್ನೂರು, ಹರೀಶಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ. ಶಿಕಾರಿಪುರ, ಸೊರಬ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿಯು ಮಳೆ ಜೋರಾಗಿದೆ.

HIGH TECH COMPOUND

ಧರೆಗುರುಳಿದ ಮರಗಳು

ಜೋರು ಮಳೆಯ ಜೊತೆಗೆ ಕೆಲವೆಡೆ ಗಾಳಿಯು ಬಿರುಸಾಗಿದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿವೆ (Trees Uprooted). ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ಅಗ್ರಹಾರ ರಸ್ತೆಯಲ್ಲಿ ಮರ ಧರೆಗುರುಳಿದೆ. ಮಂಡಗದ್ದೆ ಸಮೀಪದ ನಿಡಗಳಲೆ ಬಳಿ ಬೃಹತ್‌ ಮರವೊಂದು ಬುಡಮೇಲಾಗಿದೆ. ಇದರಿಂದ ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಿದ್ಯುತ್‌ ತಂತಿಯ ಮೇಲೆ ಮರ ಉರುಳಿದ್ದರಿಂದ ಕಂಬಗಳು ಮುರಿದು ಬಿದ್ದಿದ್ದು, ಹಲವು ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಡಿತವಾಗಿದೆ.

Tree Uprooted in Shimoga Thirthahalli Highway road

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚೇತರಿಕೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

ಡ್ಯಾಂಗೆ ಒಳ ಹರಿವು ಹೆಚ್ಚಳ

ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಈಗಾಗಲೇ ಜಲಾಶಯ ಭರ್ತಿಯಾಗಿರುವುದರಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದಲ್ಲಿ ತುಂಗಾ ನದಿಯ ಮಟ್ಟ ಏರಿಕೆಯಾಗಿದ್ದು, ಮಂಟಪ ಮುಕ್ಕಾಲು ಭಾಗ ಮುಳುಗಿದೆ.

ಇದನ್ನೂ ಓದಿ – ʼಅಡಿಕೆ ರೇಟ್‌ ದಿಢೀರ್‌ ಕುಸಿತ, 60 ಸಾವಿರ ತಲುಪಬೇಕಿದ್ದ ಧಾರಣೆ ಕುಸಿಯಲು ಕಾರಣವೇನು?ʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment