ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 25 JULY 2023
SHIMOGA : ಹಾಫ್ ಹೆಲ್ಮೆಟ್ (Half Helmet) ಧರಿಸಿ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹೆಲ್ಮೆಟ್ ಮಾರಾಟ ಮಳಿಗೆಗಳ ಮೇಲೂ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಐಎಸ್‌ಐ ಪ್ರಮಾಣಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಪೂರ್ವ ಮತ್ತು ಪಶ್ಚಿಮ ಸಂಚಾರ ಠಾಣೆ ಪೊಲೀಸರು ಶಿವಮೊಗ್ಗ ನಗರದ ವಿವಿಧ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ನಡೆಸಿದರು. 600 ಹಾಫ್ ಹೆಲ್ಮೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು, ಭದ್ರಾವತಿಯಲ್ಲಿಯು ದಾಳಿ ನಡೆಸಿದ ಪೊಲೀಸರು 141 ಹಾಫ್ ಹೆಲ್ಮೆಟ್‌ಗಳನ್ನು (Half Helmet) ವಶಪಡಿಸಿಕೊಂಡಿದ್ದಾರೆ. ಒಟ್ಟು 741 ಹೆಲ್ಮೆಟ್‌ಗಳನ್ನು ಸೀಜ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, ರಾಶಿ ರಾಶಿ ಹಾಫ್ ಹೆಲ್ಮೆಟ್ ವಶಕ್ಕೆ, ವಿಡಿಯೋಗಳು ವೈರಲ್
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಶಿವಮೊಗ್ಗದಲ್ಲಿ ಡಿವೈಎಸ್‌ಪಿ ಸುರೇಶ್, ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಭದ್ರಾವತಿಯಲ್ಲಿ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಭದ್ರಾವತಿ ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
.jpeg)
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















