ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 26 JULY 2023
SHIMOGA : ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಜಿಗಿದು (jumped) ಈಜುತ್ತಿದ್ದ ಯುವಕನನ್ನು ಪೊಲೀಸರು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಿದ್ದಾರೆ. ಆತನ ವಿರುದ್ಧ ಲಘು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾರು ಆ ಯುವಕ?
ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದವನನ್ನು (jumped) ಗಂಗಪ್ಪ ಅಲಿಯಾಸ್ ಅಂಗೂರ್ ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆ ನಿವಾಸಿ. ತಾನು ನುರಿತ ಈಜುಗಾರ ಎಂದು ಪೊಲೀಸರ ಮುಂದೆ ಹೇಳಿದ್ದಾನೆ. ಆದರೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹೊಳೆಯಲ್ಲಿ ಈಜಲು ಹಾರಿ ನಿರ್ಲಕ್ಷ್ಯ ತೋರಿದ್ದರಿಂದ ಆತನ ವಿರುದ್ಧ ಲಘು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ
ವಿಡಿಯೋ ವೈರಲ್
ಗಂಗಪ್ಪ ಅಲಿಯಾಸ್ ಅಂಗೂರ್ ಶಿವಮೊಗ್ಗದ ಹೊಸ ಸೇತುವೆ ಮೇಲಿನಿಂದ ಹೊಳಗೆ ಜಿಗಿದು ಈಜಾಡಿದ್ದ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ಬೆನ್ನಿಗೆ ಕೋಟೆ ಠಾಣೆ ಇನ್ಸ್ಪೆಕ್ಟರ್ ಶಿವಪ್ರಸಾದ್ ರಾವ್ ಅವರು ವಿಡಿಯೋ ಪರಿಶೀಲನೆ ನಡೆಸಿ ಗಂಗಪ್ಪನನ್ನು ಠಾಣೆಗೆ ಕರೆತಂದು ಎಚ್ಚರಿಕೆ ನೀಡಿದ್ದಾರೆ.
.jpeg)
LATEST NEWS
- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

About The Editor
ನಿತಿನ್ ಆರ್.ಕೈದೊಟ್ಲು





