ಶಿವಮೊಗ್ಗದ ವಿದ್ಯಾನಗರದಲ್ಲಿ ವ್ಯಕ್ತಿಯ ಕೊಲೆ, ಘಟನೆಗೆ ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA LIVE | 30 JULY 2023

SHIMOGA : ಕ್ಷುಲಕ ವಿಚಾರಕ್ಕೆ ನಡೆದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ಬೆಳಗ್ಗೆ ಚರಂಡಿ ಬಳಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದ ವಿದ್ಯಾನಗರದ 5ನೇ ತಿರುವಿನ ಸುಭಾಷ್‌ ನಗರದಲ್ಲಿ ಘಟನೆ ಸಂಭವಿಸಿದೆ. ಜ್ಞಾನೇಶ್ವರ್‌ (43) ಮೃತ ವ್ಯಕ್ತಿ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಜ್ಞಾನೇಶ್ವರ್‌ ಸವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ.

PARISHRAMA NEET ACADEMY Pradeep Eshwar

ಶನಿವಾರ ವಿದ್ಯಾನಗರದ 5ನೇ ತಿರುವಿನಲ್ಲಿರುವ ಸಂಬಂಧಿಯ ಮನೆಗೆ ಜ್ಞಾನೇಶ್ವರ್‌ ಬಂದಿದ್ದರು. ರಾತ್ರಿ ಸಂಬಂಧಿಯ ಜೊತೆಗೆ ವೈಯಕ್ತಿಕ ವಿಚಾರಕ್ಕೆ ಮಾತಿಗೆ ಮಾತು (Altercation) ಬೆಳೆದು ಜಗಳವಾಗಿದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಜ್ಞಾನೇಶ್ವರ್‌ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವ ಉಂಟಾಗಿ ಚರಂಡಿ ಬಳಿ ಬಿದ್ದು ಸಾವನ್ನಪ್ಪಿದ್ದಾರೆ. ಸಂಬಂಧಿ ನಾಗರಾಜ್‌ ವಿರುದ್ಧ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ 20 ದಿನ ತಡವಾಗಲು ಕಾರಣವೇನು? ಇಲ್ಲಿದೆ 3 ಕಾರಣ

ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Leave a Comment