ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 30 JULY 2023
BHADRAVATHI : ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್) ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮನವಿ ಮಾಡಿದ್ದಾರೆ (Letter).
ಜು.27ರಂದು ಬರೆದಿರುವ ಪತ್ರದಲ್ಲಿ (Letter) ವಿಐಎಸ್‌ಎಲ್ ಕಾರ್ಖಾನೆ ಪುನಾರಂಭದ ಕುರಿತು ಕೇಂದ್ರ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಿಎಂ ಪತ್ರದಲ್ಲಿರುವ ಪ್ರಮುಖ 5 ಪಾಯಿಂಟ್
ಕರ್ನಾಟಕ ಸರ್ಕಾರದ ಅಧೀನದಲ್ಲಿದ್ದ ವಿಐಎಸ್‌ಎಲ್ ಕಾರ್ಖಾನೆಯನ್ನು ಆಧುನೀಕರಣದ ಉದ್ದೇಶದಿಂದ 1989ರಲ್ಲಿ ಭಾರತ ಸರ್ಕಾರಕ್ಕೆ ಒಪ್ಪಿಸಲಾಯಿತು. ಸರ್. ಎಂ.ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಕಾರ್ಖಾನೆ ಇದಾಗಿದೆ. ಕೆಮ್ಮಣ್ಣುಗುಂಡಿ ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಒಳಪಟ್ಟಿದ್ದರಿಂದ ಗಣಿಗಾರಿಕೆ ನಿಷೇಧಿಸಲಾಯಿತು. ಅಂದಿನಿಂದ ವಿಐಎಸ್‌ಎಲ್ ಕಾರ್ಖಾನೆಗೆ ಅದಿರು ಪೂರೈಕೆ ಸ್ಥಗಿತಗೊಂಡಿದೆ.
2015 ರಿಂದ 2018ರವರೆಗೆ ಕೇಂದ್ರ ಉಕ್ಕು ಸಚಿವರು ಮೂರು ಬಾರಿ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ರಾಜ್ಯ ಸರ್ಕಾರ ವಿಐಎಸ್‌ಎಲ್‌ಗೆ ಗಣಿ ಮಂಜೂರು ಮಾಡಿದರೆ, ಕಾರ್ಖಾನೆಯ ಅಧುನೀಕರಣಕ್ಕೆ 1000 ಕೋಟಿ ರೂ.ನಿಂದ 5000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದ್ದರು.
ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ
2017ರಲ್ಲಿ ಅಂದಿನ ರಾಜ್ಯ ಸರ್ಕಾರ ವಿಐಎಸ್‌ಎಲ್‌ಗೆ ಸಂಡೂರು ತಾಲೂಕಿನ ರಾಮದುರ್ಗದಲ್ಲಿ 150 ಎಕರೆ ಗಣಿ ಮಂಜೂರು ಮಾಡಿದೆ. ಅಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, 2024ರಲ್ಲಿ ಅದಿರು ಪೂರೈಕೆ ಆರಂಭವಾಗಲಿದೆ.
ವಿಐಎಸ್‌ಎಲ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಆದರೆ ಕೇಂದ್ರ ಸರ್ಕಾರ 2018ರಲ್ಲಿ ವಿಐಎಸ್‌ಎಲ್ ಕಾರ್ಖಾನೆ ಖಾಸಗೀಕರಣಕ್ಕೆ ಮುಂದಾಯಿತು. ಆದರೆ ಈತನಕ ಖಾಸಗಿಯವರು ಆಸಕ್ತಿ ತೋರಿಸದ ಹಿನ್ನೆಲೆ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದೆ.
ಕೇಂದ್ರ ಸರ್ಕಾರದ ನಿರ್ಧಾರಿಂದ ಭದ್ರಾವತಿಯ ಆರ್ಥಿಕತೆಗೆ ಕೊನೆಯ ಮೊಳೆ ಹೊಡೆದಂತಾಗುತ್ತದೆ. ಅಲ್ಲದೆ ಸರ್ ಎಂ.ವಿಶ್ವೇಶ್ವರಯ್ಯ ಅವರ ಕಲ್ಪನೆಯ ಕರ್ನಾಟಕದ ಭವ್ಯ ಪರಂಪರೆಗು ಪೆಟ್ಟು ಬೀಳಲಿದೆ. ಕೇಂದ್ರ ಸರ್ಕಾರ ಕಾರ್ಖಾನೆ ಕುರಿತ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವುದು ಉತ್ತಮ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422