ಗುಡ್ಡೇಕಲ್‌ ಜಾತ್ರೆ, ಶಿವಮೊಗ್ಗದಲ್ಲಿ ಒಂದು ದಿನ ಮಾರ್ಗ ಬದಲಾವಣೆ, ಯಾವ್ಯಾವ ವಾಹನ ಯಾವ ರೂಟ್‌ನಲ್ಲಿ ಓಡಾಡಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 AUGUST 2023

SHIMOGA : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್‌ 9ರಂದು ಇಡೀ ದಿನ ವಾಹನಗಳ ಸಂಚಾರದ ಮಾರ್ಗ (ROUTE CHANGE) ಬದಲಾಯಿಸಲಾಗಿದೆ.

ಯಾವೆಲ್ಲ ಮಾರ್ಗ ಬದಲಾವಣೆಯಾಗಿದೆ?

• ಬೆಂಗಳೂರು, ಭದ್ರಾವತಿ, ಎನ್.ಆರ್.ಪುರ ಕಡೆಯಿಂದ ಬರುವ ಸಿಟಿ ಬಸ್, ಖಾಸಗಿ ಬಸ್, ಇತರೆ ಭಾರಿ ವಾಹನಗಳು, ಕಾರುಗಳು ಬೈಪಾಸ್ ರಸ್ತೆ ಮೂಲಕ ಶಿವಮೊಗ್ಗ ನಗರದ ಕಡೆಗೆ ಹೋಗಬೇಕು.

Harohara Jathre in Shimoga

• ಶಿವಮೊಗ್ಗ ನಗರದ ಕಡೆಯಿಂದ ಬೆಂಗಳೂರು, ಭದ್ರಾವತಿ, ಚಿತ್ರದುರ್ಗ, ಹೊಳೆಹೊನ್ನೂರು ಕಡೆಗೆ ಹೋಗುವ ಎಲ್ಲಾ ಸಿಟಿ ಬಸ್ಸುಗಳು, ಖಾಸಗಿ ಬಸ್ಸುಗಳು, ಭಾರಿ ವಾಹನಗಳು ಮತ್ತು ಕಾರುಗಳು ಬೈಪಾಸ್ ರಸ್ತೆ ಮೂಲಕ ಹೋಗಬೇಕು.

• ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಬಸ್ಸುಗಳು ಮತ್ತು ಭಾರಿ ವಾಹನಗಳು ಭದ್ರಾವತಿ ಮಾರ್ಗವಾಗಿ ಬೈಪಾಸ್ ಮೂಲಕ ಶಿವಮೊಗ್ಗ ನಗರ ಒಳ ಬರಬಹುದು ಮತ್ತು ಹೊರ ಹೋಗಬಹುದು.

ಇದನ್ನೂ ಓದಿ – ಶಿವಮೊಗ್ಗದ ‘ಹರೋಹರ ಜಾತ್ರೆ’ ದಿನಾಂಕ ಘೋಷಣೆ, ಜುಲೈ ಬದಲು ಆಗಸ್ಟ್‌ ತಿಂಗಳಲ್ಲಿ ನಡೆಯುತ್ತಿರುವುದೇಕೆ?

• ಹೊಳೆಹೊನ್ನೂರು ಸರ್ಕಲ್’ನಿಂದ ಗುರುಪುರದ ಯಲವಟ್ಟಿ ಕ್ರಾಸ್ ವರೆಗೆ ಸಾರ್ವಜನಿಕ ವಾಹನಗಳು ಓಡಾಡದಂತೆ ನಿಷೇಧಿಸಲಾಗಿದೆ.

• ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಆ ಕಡೆಗೆ ಹೋಗುವ ಎಲ್ಲಾ ಲಘು ವಾಹನಗಳು ಪಿಳ್ಳಂಗಿರಿ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಮತ್ತು ಹೊಳೆಬೆನವಳ್ಳಿ ತಾಂಡ ಕ್ರಾಸ್‌ನಿಂದ ಯಲವಟ್ಟಿ ಮಾರ್ಗವಾಗಿ ಮಲವಗೊಪ್ಪದ ಮೂಲಕ ಬಿ.ಹೆಚ್‌.ರಸ್ತೆಗೆ ಸೇರಿಕೊಂಡು ಬೈಪಾಸ್‌ ರಸ್ತೆಯ ಮಾರ್ಗವಾಗಿ ಶಿವಮೊಗ್ಗ ನಗರಕ್ಕೆ ಹೋಗಬೇಕು.

• ಶಿವಮೊಗ್ಗ ನಗರದಿಂದ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗುವ ಲಘು ವಾಹನಗಳು (ದ್ವಿಚಕ್ರ ವಾಹನಗಳು ಮತ್ತು ಕಾರುಗಳು) ಬೈಪಾಸ್ ರಸ್ತೆ ಮೂಲಕ ಮಲವಗೊಪ್ಪದ ಯಲವಟ್ಟಿ ಕ್ರಾಸ್ ನಿಂದ ಯಲವಟ್ಟಿ ಮಾರ್ಗವಾಗಿ ಪಿಳ್ಳಂಗಿರಿ ಕ್ರಾಸ್‌ ಮೂಲಕ ಹೊಳೆಹೊನ್ನೂರು ಚಿತ್ರದುರ್ಗಕ್ಕೆ ಹೋಗಬೇಕು.

• ಹರಿಹರ ಹೊನ್ನಾಳಿಯಿಂದ ಬರುವ ಎಲ್ಲಾ ಭಾರಿ ವಾಹನಗಳು ಮತ್ತು ಬಸ್ಸುಗಳು ಸಂಗೊಳ್ಳಿ ರಾಯಣ್ಣ ಸರ್ಕಲ್‌, ಕೆ.ಇ.ಬಿ ಸರ್ಕಲ್‌, ಉಷಾ ನರ್ಸಿಂಗ್‌ ಹೋಂ ಸರ್ಕಲ್‌ 100 ಅಡಿ ರಸ್ತೆ, ವಿನೋಬನಗರ ಮಾರ್ಗವಾಗಿ ತೆರಳಬೇಕು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment