‘ಮೋದಿ ಸರ್ಕಾರಕ್ಕೆ ಮುಖಭಂಗ, ಬಿಜೆಪಿಯವರಿಗೆ ಕೆಟ್ಟ ಮೇಲೂ ಬುದ್ದಿ ಬಂದಿಲ್ಲ’, ಶಿವಮೊಗ್ಗದಲ್ಲಿ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHIMOGA : ಕಾಂಗ್ರೆಸ್ (Congress) ವರಿಷ್ಠ ರಾಹುಲ್ ಗಾಂಧಿ (Rahul Gandhi) ಅವರ ಪರವಾಗಿ ಸುಪ್ರೀಂ ಕೋರ್ಟ್ (Supreme Court) ತೀರ್ಪು ನೀಡಿರುವುದನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸ್ವಾಗತಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ವಿನಾಕಾರಣ ಕಿರುಕುಳ ನೀಡುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೂ ಕಿರುಕುಳ ನೀಡಿತ್ತು. ರಾಹುಲ್ ಗಾಂಧಿ ಅವರ ಜನಪ್ರಿಯತೆ ಸಹಿಸಲಾಗದೆ ಸೇಡಿನ ರಾಜಕಾರಣ ಮಾಡಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಕೋರ್ಟ್‌ಗಳು ಕೂಡ ಅದನ್ನು ಎತ್ತಿ ಹಿಡಿದಿದ್ದವು. ಆದರೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ರಾಹುಲ್ ಅವರ ಪರ ತೀರ್ಪು ನೀಡಿದೆ ಎಂದರು.

ಸುಪ್ರೀಂ ಕೋರ್ಟಿನ ತೀರ್ಪಿನಿಂದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿದಂತಾಗಿದೆ. ಸತ್ಯಕ್ಕೆ ಜಯ ಸಿಕ್ಕಿದೆ. ಜನರ ನಂಬಿಕೆಗಳನ್ನು ಉಳಿಸಿಕೊಂಡಂತಾಗಿದೆ. ಕೇಂದ್ರ ಸರಕಾರಕ್ಕೆ ಮುಖಭಂಗವಾಗಿದೆ ಎಂದರು.

ಇದನ್ನೂ ಓದಿ:ಶಿವಮೊಗ್ಗ ಜಿಲ್ಲೆಯಿಂದ ಮಳೆ ಮಾಯ, ಮತ್ತೆ ಶುರುವಾಯ್ತು ಬಿಸಿಲ ಝಳ, 24 ಗಂಟೆಯಲ್ಲಿ ಎಷ್ಟಾಗಿದೆ ಮಳೆ?

ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ

ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಕೆಲವರಿಗೆ ಕೆಟ್ಟ ಮೇಲೆ ಬುದ್ದಿ ಬರುತ್ತದೆ. ಆದರೆ, ಈ ಬಿಜೆಪಿಯವರಿಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ. ಸಿ.ಟಿ. ರವಿ, ಈಶ್ವರಪ್ಪ, ರೇಣುಕಾಚಾರ್ಯ ಮುಂತಾದವರು ಮೂಲೆ ಗುಂಪಾಗಿದ್ದರೂ ಮಾತನಾಡುವುದನ್ನು ಬಿಡುತ್ತಿಲ್ಲ. ಇದೆ ರೀತಿ ಮುಂದುವರೆದರೆ ಆರಗ ಜ್ಞಾನೇಂದ್ರ ಅವರಿಗೆ ಜನರು ಮಂದೆ ಪಾಠ ಕಲಿಸಲಿದ್ದಾರೆ ಎಂದರು.

ಪ್ರಮುಖರಾದ ಚಂದ್ರಭೂಪಾಲ್, ಕಲೀಮ್ ಪಾಶಾ, ಚಂದ್ರಶೇಖರ್, ಗಂಗಾಧರ್, ಎ.ಬಿ. ಮಾರ್ಟಿಸ್, ಎನ್.ಡಿ. ಪ್ರವೀಣ್ ಕುಮಾರ್ ಇತರರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 8, 2023

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment