ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 AUGUST 2023
SHIMOGA : ಗುಡ್ಡೇಕಲ್‌ನ (Guddekal) ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ (Shree Baala Subramanya Swamy Temple) ದೇವಸ್ಥಾನದ ಆಡಿಕೃತ್ತಿಕೆ ಜಾತ್ರೆಗೆ ವಿಜೃಂಭಣೆಯ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಹರಕೆ ತೀರಿಸಲು ಭಕ್ತರು (Devotees) ಆಗಮಿಸುತ್ತಿದ್ದಾರೆ.
ಇವತ್ತಿನಿಂದ ಎರಡು ದಿನ ಆಡಿಕೃತ್ತಿಕೆ ಜಾತ್ರೆ ನಡೆಯಲಿದೆ. ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಾಯಿತು. ನಗರದ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು, ಗುಡ್ಡ ಹತ್ತಿ ಹರಕೆ ತೀರಿಸುತ್ತಿದ್ದಾರೆ. ಮಹಿಳೆಯರು, ಮಕ್ಕಳು ಕೂಡ ಕಾವಡಿ ಹೊತ್ತು ಬರುತ್ತಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ನಗರದ ವಿವಿಧೆಡೆ ಆ.8ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ವ್ಯತ್ಯಯ
ಆಡಿಕೃತ್ತಿಕೆ ಜಾತ್ರೆ ಹಿನ್ನೆಲೆ ಗುಡ್ಡೇಕಲ್ ದೇವಸ್ಥಾನದ ಮುಂಭಾಗ ತಿಂಡಿ –ತಿನಿಸು, ಆಟಿಕೆ, ಅಲಂಕಾರಿಕ ವಸ್ತುಗಳು, ನಾವೆಲ್ಟಿ ಸೇರಿದಂತೆ ವಿವಿಧ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಇನ್ನು, ಜಾತ್ರೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಗುಡ್ಡೇಕಲ್ ಜಾತ್ರೆ, ಶಿವಮೊಗ್ಗದಲ್ಲಿ ಒಂದು ದಿನ ಮಾರ್ಗ ಬದಲಾವಣೆ, ಯಾವ್ಯಾವ ವಾಹನ ಯಾವ ರೂಟ್‌ನಲ್ಲಿ ಓಡಾಡಬೇಕು?

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












