ಉರುಳಿಗೆ ಸಿಲುಕಿ ಚಿರತೆ ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡು

SHIVAMOGGA LIVE NEWS | 8 AUGUST 2023

BHADRAVATHI : ಉರುಳಿಗೆ ಸಿಲುಕಿ ಗಂಡು ಚಿರತೆಯೊಂದು (leopard) ಸಾವನ್ನಪ್ಪಿದೆ. ಬೆಳಗ್ಗೆ ಚಿರತೆ ಉರುಳಿಗೆ ಸಿಲುಕಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ

ಭದ್ರಾವತಿ ತಾಲೂಕು ಅಗರದಹಳ್ಳಿಯಲ್ಲಿ ಚಿರತೆ ಉರುಳಿಗೆ ಸಿಲುಕಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದ ಹಿನ್ನೆಲೆ ಕಳೆದ ತಿಂಗಳು ಅರಣ್ಯ ಇಲಾಖೆ ವತಿಯಿಂದ ಬೋನ್‌ ಇಡಲಾಗಿತ್ತು. ಆದರೆ ಚಿರತೆ ಸಿಕ್ಕಿರಲಿಲ್ಲ. ಇವತ್ತು ಉರುಳಿಗೆ ಸಿಲುಕಿ ಸಾವನ್ನಪ್ಪಿದೆ.

PARISHRAMA neet academy

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment