BREAKING NEWS – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 AUGUST 2023

SHIMOGA : ಚಿರತೆಯೊಂದು ಮಹಿಳೆ ಮೇಲೆ ದಾಳಿ (Attack) ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.  42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

Leopard-attack-at-Bikkonahalli-in-Shimoga-Taluk

ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮ ಬಹು ಹೊತ್ತಾದರು ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ – ಉರುಳಿಗೆ ಸಿಲುಕಿ ಚಿರತೆ ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡು

ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ ಕುರುಹು ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು, ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಸ್ಥಳದಲ್ಲಿನ ಹೆಜ್ಜೆ ಗುರುತುಗಳನ್ನ ಗಮನಿಸಿ ಚಿರತೆ ದಾಳಿ ನಡೆಸಿರಬಹುದು ಎಂದು ಶಂಕಿಸಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment