ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 AUGUST 2023
SAGARA : ಅನಿರೀಕ್ಷಿತ ತಪಾಸಣೆಯಲ್ಲಿ ಒಬ್ಬ ಕಿಶೋರ ಕಾರ್ಮಿಕ ಪತ್ತೆಯಾಗಿದ್ದಾನೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ. ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department) ಪೊಲೀಸ್ ಇಲಾಖೆ ವತಿಯಿಂದ ಸಾಗರ (Sagara) ತಾಲೂಕಿನಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಿತ್ತು.
ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ 1986 ಹಾಗೂ ತಿದ್ದುಪಡಿ ಕಾಯಿದೆ 2016ರಡಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಮಂಡಕ್ಕಿ ಭಟ್ಟಿಗಳಲ್ಲಿ, ಬಾಲಕಾರ್ಮಿಕ ಕಾಯಿದೆ ಕುರಿತು ಅರಿವು ಮೂಡಿಸಲಾಯಿತು. ನಂತರ ಆಟೊ ಕಾಂಪ್ಲೆಕ್ಸ್ ಬಿ.ಎಚ್. ರಸ್ತೆ, ಗಾಂಧಿನಗರ ಮುಂತಾದ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಯಿತು.
ತಪಾಸಣೆಯಲ್ಲಿ ಸಾಗರ ಕಾರ್ಮಿಕ ನಿರೀಕ್ಷಕಿ ಶಿಲ್ಪ, ಯೋಜನಾ ನಿರ್ದೇಶಕ ಎ.ಎಸ್.ರಘುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಾಂತಾಬಾಯಿ, ಪೊಲೀಸ್ ಇಲಾಖೆಯ ಮೀರಾಬಾಯಿ ತಂಡದಲ್ಲಿದ್ದರು.
.jpeg)
LATEST NEWS
- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















