ಭಾರತ ಬಿಟ್ಟು ತೊಲಗಿ, ರೈತರು, ಕೃಷಿ ಪದ್ಧತಿ ಉಳಿಸಿ, ಶಿವಮೊಗ್ಗದಲ್ಲಿ ಅನ್ನದಾತರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 AUGUST 2023

Shivamogga-Live-Number-1-Website

SHIMOGA : ಕಾರ್ಪೊರೇಟ್‌ ಕಂಪನಿಗಳೆ (Corporate Companies) ಭಾರತ ಬಿಟ್ಟು ತೊಲಗಿ, ಕೃಷಿ ಭೂಮಿ ಉಳಿಸಿ ಘೋಷಣೆಯೊಂದಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯ ವರಿಷ್ಠ ಕೆ.ಟಿ.ಗಂಗಾಧರ್‌ (K.T. Gangadhar) ಅವರ ನೇತೃತ್ವದಲ್ಲಿ ರೈತರು ಪ್ರತಿಭಟನೆ ಮಾಡಿದರು.

ಕೃಷಿ ಕ್ಷೇತ್ರ ಭಾರತದಲ್ಲಿ ಶೇ.60ರಷ್ಟು ಉದ್ಯೋಗ ಸೃಷ್ಟಿ ಮಾಡಿದೆ. ಆದರೆ ಕಾರ್ಪೊರೇಟ್‌ ಕಂಪನಿಗಳು ಲಗ್ಗೆ ಇಟ್ಟು (Agriculture) ವ್ಯವಸ್ಥೆಯನ್ನು ಹಾಳುಗೆಡವುತ್ತಿವೆ. ಯಂತ್ರೋಪಕರಣ, ಅತಿಯಾದ ರಸಗೊಬ್ಬರ ಮತ್ತು ಕೀಟನಾಶಕ ಬಳಕೆ ಮಾಡುತ್ತಿವೆ. ಇದು ಈ ದೇಶದ ಕೃಷಿ ಪದ್ಧತಿಗೆ ವಿರುದ್ಧವಾದದ್ದು. ಕೃಷಿ ಉತ್ಪಾದನೆಯನ್ನು ವ್ಯಾಪಾರ ಉದ್ಯಮವಾಗಿ ನಡೆಸುವುದು ಸೇರಿದಂತೆ ಕಾರ್ಪೊರೇಟ್‌ ಸಂಸ್ಥೆಗಳು ಹಲವು ಸಮಸ್ಯೆ ಸೃಷ್ಟಿಸಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದನ್ನೂ ಓದಿ-‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ

ಇದೇ ವೇಳೆ ಮಾತನಾಡಿದ ರೈತ ಮುಖಂಡ ಕೆ.ಟಿ.ಗಂಗಾಧರ್‌, 1942ರ ಆಗಸ್ಟ್‌  9ರಂದು ಗಾಂಧೀಜಿಯವರು ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ ಚಳವಳಿ ಆರಂಭಿಸಿದ್ದರು. ಇವತ್ತು ದೇಶದ ಕೃಷಿ ಪದ್ಧತಿಗೆ ಮಾರಕವಾಗಿರುವ ಕಾರ್ಪೊರೇಟ್‌ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂದು ಘೋಷಣೆಯೊಂದಿಗೆ ಹೋರಾಟ ಆರಂಭಿಸಿದ್ದೇವೆ ಎಂದು ತಿಳಿಸಿದರು.

ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್‌ ಘೋರ್ಪಡೆ, ಗೌರವಾಧ್ಯಕ್ಷ ಈರಪ್ಪ ಪ್ಯಾಟಿ, ಜಿಲ್ಲಾಧ್ಯಕ್ಷ ಹಾಲೇಶಪ್ಪ ಗೌಡ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥೇಶ್ವರ, ಕೆ.ಎಸ್.ಪುಟ್ಟಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment