ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 AUGUST 2023
NEW DELHI : ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಶೋಧನಾ (Maize Research Centre) ಕೇಂದ್ರ ಸ್ಥಾಪಿಸಲು ಅಗತ್ಯ ಆರ್ಥಿಕ ನೆರವು ಮಂಜೂರು ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ನವದೆಹಲಿಯಲ್ಲಿ ಇವತ್ತು ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆ ಪ್ರದೇಶ ಹೆಚ್ಚುತ್ತಿದೆ. ಆದರೆ ಇಳುವರಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಈ ಕೇಂದ್ರ ಇಳುವರಿ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಕೇಂದ್ರ ಸ್ಥಾಪನೆಗೆ ಶಿಫಾರಸು
ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಮೆಕ್ಕೆ ಜೋಳ ಸಂಶೋಧನಾ ಕೇಂದ್ರಕ್ಕೆ ಸ್ಥಳ ಪರಿಶೀಲನೆ ನಡೆಸಿತ್ತು. ಶಿವಮೊಗ್ಗದಲ್ಲಿ ಐಸಿಎಆರ್- ಐಐಎಂಆರ್ನ ಮೆಕ್ಕೆಜೋಳ ಪ್ರಾದೇಶಿಕ ಸಂಶೋಧನಾ ಕೇಂದ್ರ ಸ್ಥಾಪಿಸಲು ಶಿಫಾರಸು ಮಾಡಿದೆ. ಕೇಂದ್ರಕ್ಕೆ ಪೂರಕವಾದ ಅಂಶಗಳು ಶಿವಮೊಗ್ಗದಲ್ಲಿ ಇದೆ. ಅದರಂತೆ, ಅಗತ್ಯ ಕ್ರಮಕ್ಕಾಗಿ ಎಸ್ಎಸ್ಸಿ ವರದಿಯನ್ನು ಐಸಿಎಆರ್ಗೆ ಸಲ್ಲಿಸಲಾಗಿದೆ. ಇದಕ್ಕೆ ಸುಮಾರು ಐದು ಕೋಟಿ ಅನುದಾನ ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್ ನ್ಯೂಸ್, ಕಾಲುವೆಗಳಿಗೆ ನೀರು ಹರಿಸಲು ಡೇಟ್ ಫಿಕ್ಸ್
ಸರಾಸರಿ ಇಳುವರಿ ಹೆಚ್ಚಳವಾಗಲಿದೆ
ಶಿವಮೊಗ್ಗದಲ್ಲಿ ಈ ಸಂಶೋಧನಾ ಕೇಂದ್ರ ಸ್ಥಾಪನೆಯು ರಾಜ್ಯದ ಸರಾಸರಿ ಇಳುವರಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಹೀಗಾಗಿ ಇದು ರಾಜ್ಯದ ರೈತರಿಗೆ ದೊಡ್ಡ ಪ್ರಯೋಜನವಾಗಲಿದೆ. ಜೊತೆಗೆ ದೇಶದ ಇತರ ಭಾಗದ ರೈತರಿಗೂ ತನ್ನ ಸಂಶೋಧನೆ ಮೂಲಕ ನೆರವಾಗಲಿದೆ. ಈ ಹಿನ್ನಲೆ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಮಂಜೂರು ಮಾಡಲು ಸಂಸದ ರಾಘವೇಂದ್ರ ವಿತ್ತ ಸಚಿವರಿಗೆ ಮನವಿ ಮಾಡಿದರು.
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಪುನರಾರಂಭಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದಕ್ಕಾಗಿ ಅವರು ಸಚಿವರನ್ನು ಅಭಿನಂದಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422