ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಕೊಡಚಾದ್ರಿ ನಿರ್ಬಂಧ ತೆರವು, ಜೀಪ್‌ಗಳಿಗೆ ಕಂಡೀಷನ್‌, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 AUGUST 2023

NITTURU : ಮಳೆ ಹಿನ್ನೆಲೆ ಪ್ರವಾಸಿಗರು (Tourism), ಭಕ್ತರ ಸುರಕ್ಷತೆ ದೃಷ್ಟಿಯಿಂದ ಪ್ರಮುಖ ಪ್ರವಾಸಿ ತಾಣ ಕೊಡಚಾದ್ರಿಗೆ (Kodachadri) ವಿಧಿಸಿದ್ದ ನಿರ್ಬಂಧವನ್ನು ವನ್ಯಜೀವಿ ವಿಭಾಗ ತೆರವುಗೊಳಿಸಿದೆ. ಭಾನುವಾರದಿಂದಲೆ ಗಿರಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಜೀಪ್‌ (Jeep) ಮಾಲೀಕರು ಮುಚ್ಚಳಿಕೆ ಬರೆದು ಕೊಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.

Kodachadri Mountain Hosanagara 1

ನಿರ್ಬಂಧ ತೆರವು

ಮಳೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜು.30ರಂದು ವನ್ಯಜೀವಿ ವಿಭಾಗ ನಿರ್ಬಂಧ ವಿಧಿಸಿತ್ತು. ಪ್ರವಾಸಿ ತಾಣ ಮತು ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದರಿಂದ ಸಾವಿರಾರು ಪ್ರವಾಸಿಗರು ನಿರಾಸೆ ಅನುಭವಿಸಿದ್ದರು. ಅಲ್ಲದೆ ಕೊಡಚಾದ್ರಿ ಗಿರಿಯನ್ನು ನಂಬಿಕೊಂಡು ನೂರಾರು ಕುಟುಂಬಗಳಿವೆ. ಇದೇ ಕಾರಣಕ್ಕೆ ಕಟ್ಟಿನಹೊಳೆ (Kattinahole) ಬಳಿ ಕೊಡಚಾದ್ರಿ ವ್ಯವಸ್ಥಾಪನ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಈಗ ಮಳೆ ಕಡಿಮೆಯಾಗಿದ್ದು ನಿರ್ಬಂಧ ತೆರವು ಮಾಡಲಾಗಿದೆ.

ಜೀಪ್‌ಗೆ ಕಂಡೀಷನ್‌

ಕೊಡಚಾದ್ರಿಗೆ ತೆರಳುವ ಜೀಪ್‌ಗಳಿಗೆ ವನ್ಯಜೀವಿ ವಿಭಾಗ ಷರತ್ತು ವಿಧಿಸಿದೆ. ವಾಹನ ಮಾಲೀಕರು ಮುಚ್ಚಳಿಕೆ ಬರೆದುಕೊಡಬೇಕು ಎಂದು ಸೂಚಿಸಿದೆ. ಮುಚ್ಚಳಿಕೆಯಲ್ಲಿ, ವಾಹನದಲ್ಲಿ ತೆರಳುವ ಸಂದರ್ಭ ಭಕ್ತಾಧಿಗಳು, ಪ್ರವಾಸಿಗರಿಗೆ ಅನಾಹುತವಾದಲ್ಲಿ, ವಾಹನಕ್ಕೆ ಹಾನಿಯಾದರೆ ಮಾಲೀಕರೆ ಹೊಣೆ. ನಿಗದಿತ ಸಮಯದ ಕುರಿತು ಪ್ರವಾಸಿಗರಿಗೆ ಮಾಹಿತಿ ನೀಡಬೇಕು, ನಿಗದಿತ ಸಮಯದೊಳಗೆ ಪ್ರವಾಸಿಗರನ್ನು ಕರೆತರಬೇಕು, ಧ್ವನಿವರ್ಧಕ ಬಳಕೆ ಮಾಡದಿರುವುದು, ಮಾದಕ ವಸ್ತು ನಿರ್ಬಂಧ ಸೇರಿದಂತೆ ವಿವಿಧ ಸೂಚನೆಗಳನ್ನು ಪಾಲಿಸುತ್ತೇನೆ ಎಂದು ಮುಚ್ಚಳಿಕೆ ಬರೆದುಕೊಡಬೇಕಿದೆ.

ಇದನ್ನೂ ಓದಿ – ರಾತ್ರೋರಾತ್ರಿ ರೆಸಾರ್ಟ್‌ ಮೇಲೆ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ, ಏನೇನೆಲ್ಲ ಸಿಕ್ತು?

ಸದ್ಯ ಕೊಡಚಾದ್ರಿ ಪ್ರವೇಶಕ್ಕೆ ಇದ್ದ ನಿರ್ಬಂಧ ತೆರವಾಗಿರುವುದು ಪ್ರವಾಸಿಗರ ಖುಷಿ ಹೆಚ್ಚಿಸಿದೆ. ಕೇರಳ ಸೇರಿದಂತೆ ವಿವಿಧೆಡೆಯಿಂದ ಪ್ರವಾಸಿಗರ ಆಗಮನ ಶುರುವಾಗಿದೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 14, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment