ಶಿವಮೊಗ್ಗ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮತ್ತೆ ಲೋಕ ಅದಾಲತ್‌, ಯಾರೆಲ್ಲ ಅನುಕೂಲ ಪಡೆಯಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 AUGUST 2023

SHIMOGA : ರಾಜ್ಯಾದ್ಯಂತ ಸೆ.9ರಂದು ಲೋಕ ಅದಾಲತ್‌ (Lok Adalat) ನಡೆಯಲಿದೆ. ಆ ದಿನ ಶಿವಮೊಗ್ಗ (Shimoga) ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಯು ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ (Karnataka State Legal Services Authority) ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಸಿ.ಎನ್‌.ಚಂದನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾರೆಲ್ಲ ಭಾಗವಹಿಸಬಹುದು?

ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನಗಳ, ಕೌಟುಂಬಿಕ, ಭೂ ಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೊಂದಣಿ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕು ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಲು ಅವಕಾಶ ಇದೆ. ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದ್ದು ಇದರ ಸದುಪಯೋಗ ಕಕ್ಷಿಗಾರರು ಪಡೆಯಬಹುದಾಗಿದೆ.

ಇದನ್ನೂ ಓದಿ-ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ದಿನ? ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment