ಶಿವಮೊಗ್ಗದಲ್ಲಿ ಸರ್ಕಾರಿ ಕಚೇರಿಗಳು ಜಗಮಗ, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ರಂಗೋಲಿ ಹಬ್ಬ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 AUGUST 2023

SHIMOGA : ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ಶಿವಮೊಗ್ಗ ನಗರದ ಸರ್ಕಾರಿ ಕಚೇರಿಗಳು ವಿದ್ಯುತ್‌ ದೀಪಾಲಂಕಾರದಿಂದ (Lighting) ಕಂಗೊಳಿಸುತ್ತಿವೆ. ನಗರದಾದ್ಯಂತ ಇರುವ ಎಲ್ಲ ಕಚೇರಿಗಳಿಗೆ ವಿವಿಧ ಬಣ್ಣದ ದೀಪಗಳನ್ನು ಅಳವಡಿಸಲಾಗಿದೆ. ಇನ್ನು, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ರಂಗೋಲೆ (Rangoli) ಹಬ್ಬ ಆಯೋಜಿಸಲಾಗಿತ್ತು.

lighting-at-Mahanagara-Palike-and-Rangoli-at-Police-office

ಕಚೇರಿಗಳು ಜಗಮಗ

ಶಿವಮೊಗ್ಗ ನಗರದಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ (Lighting) ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಳೆದು ಎರಡು ದಿನದಿಂದ ಬಣ್ಣ ಬಣ್ಣದ ದೀಪಗಳನ್ನ ಹಾಕಲಾಗಿದೆ. ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ, ತಾಲೂಕು ಕಚೇರಿ, ಮಹಾನಗರ ಪಾಲಿಕೆ ಕಚೇರಿ ಸೇರಿದಂತೆ ಬಹುತೇಕ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ನಗರದ ಪ್ರಮುಖ ವೃತ್ತಗಳು ಕೂಡ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

Police Ranogli Competation

ರಂಗೋಲಿ ಹಬ್ಬ

ಮತ್ತೊಂದೆಡೆ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ರಂಗೋಲಿ ಹಬ್ಬ ಹೆಸರಿನಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಬಗೆಬಗೆ ರಂಗೋಲಿ ಹಾಕಿ ಖುಷಿ ಪಟ್ಟರು.

ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ಮೂವರು ಅರೆಸ್ಟ್‌, ವಿಚಾರಣೆ ವೇಳೆ ಹೇಳಿದ್ದೇನು?

ರಂಗೋಲಿಗಳಿಂದಾಗಿ ಜಿಲ್ಲಾ ಪೊಲೀಸ್‌ ಕಚೇರಿ ಆವರಣ ಕಂಗೊಳಿಸುತ್ತಿತತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ ಭೂಮರೆಡ್ಡಿ ಸೇರಿದಂತೆ ಹಲವರು ಈ ವೇಳೆ ಹಾಜರಿದ್ದರು.

Rangoli Competation in Shimoga Police Office

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment