ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 AUGUST 2023

SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್‌ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

ಅಧ್ಯಯನಕ್ಕೆ ಕಡಿಮೆ ಸಮಯ ಸಿಗುವುದರಿಂದ ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಲಿದ್ದಾರೆ. ಆರೋಗ್ಯದ ಮೇಲೂ ಪರಿಣಾಮ ಉಂಟಾಗಲಿದೆ. ಆದ್ದರಿಂದ ವೇಳಾಪಟ್ಟಿಯನ್ನು ಸಡಿಲಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಈ ವೇಳೆ ಸಿ.ಎಂ.ಚಿನ್ಮಯ್‌, ಅಜಿತ್‌, ದರ್ಶನ್‌ ಸೇರಿದಂತೆ ಹಲವರು ಇದ್ದರು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment