ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 AUGUST 2023
SHIMOGA : ಅಪಘಾತಪಡಿಸಿ ಪರಾರಿಯಾಗುವ ವೇಳೆ ಕಾರೊಂದು ಚಾಲಕನ (Driver) ನಿಯಂತ್ರಣ ತಪ್ಪಿ ಮೈಲಿಗಲ್ಲಿನ (Mile Stone) ಮೇಲೆ ಹತ್ತಿ ನಿಂತಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ.
ಶಿವಮೊಗ್ಗದ ಸಹ್ಯಾದ್ರಿ ಕಾಲೇಜು (Sahyadri College) ಹಾಸ್ಟೆಲ್ ಪಕ್ಕದ ಮತ್ತೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದು, ಒಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಥ ಸಂಚಲನಕ್ಕೆ ಮಹಿಳಾ ಐಪಿಎಸ್ ಅಧಿಕಾರಿ ನೇತೃತ್ವ, ಇದೇ ಮೊದಲು ಕನ್ನಡದಲ್ಲಿ ಆದೇಶ
ಏನಿದು ಪ್ರಕರಣ?
ಕಾರೊಂದು ಬೈಪಾಸ್ ರಸ್ತೆಯಲ್ಲಿ ಅಪಘಾತಪಡಿಸಿ ಸ್ಥಳದಲ್ಲಿ ನಿಲ್ಲದೆ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ಕೂಡಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಕಾರನ್ನು ಹಿಂಬಾಲಿಸಿದ್ದಾರೆ. ಸ್ಥಳೀಯರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಚಾಲಕ ಎಂಆರ್‌ಎಸ್ ವೃತ್ತದ ಕಡೆಯಿಂದ ಬಿ.ಹೆಚ್.ರಸ್ತೆಗೆ ಬಂದಿದ್ದು, ಸಹ್ಯಾದ್ರಿ ಕಾಲೇಜು ಪಕ್ಕದ ಮತ್ತೂರು ರೋಡ್‌ಗೆ ಕಾರು ತಿರುಗಿಸಿದ್ದಾನೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮೈಲಿಗಲ್ಲಿಗೆ ಡಿಕ್ಕಿ ಹೊಡೆದು ಅದರ ಮೇಲೆ ಹತ್ತಿ ನಿಂತಿದೆ. ಕೂಡಲೆ ಒಳಗಿದ್ದವರು ಕಾರು ಬಿಟ್ಟು ಓಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಬ್ಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
.jpeg)
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





