ಸ್ನೇಹಿತನ ಮಗನ ಅಪಹರಣ, ಕುಮದ್ವತಿಯಲ್ಲಿ ಮುಳುಗಿಸಿ ಕೊಲೆ, ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ನ್ಯಾಯಾಲಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 AUGUST 2023

SHIMOGA : ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ 8 ವರ್ಷದ ಮಗನನ್ನು ನದಿಯಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ (Shimoga Court) ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ.

ಶಿಕಾರಿಪುರ ತಾಲೂಕು ಚುರ್ಚಿಗುಂಡಿ (Churchigundi) ಗ್ರಾಮದ ಎನ್‌.ಎಂ.ಬಸವರಾಜಪ್ಪ (40) ಶಿಕ್ಷೆಗೆ ಒಳಗಾದವನು. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ ಹಳೆ ದ್ವೇಷಕ್ಕೆ ಆತನ ಮಗ ಪ್ರೇಮ್‌ ಕುಮಾರ್‌ನನ್ನು (8) ಬಸವರಾಜಪ್ಪ ಅಪಹರಣ ಮಾಡಿದ್ದ. 2017ರ ಮಾರ್ಚ್‌ 2ರಂದು ಆಳ್ಕೊಳ ಸರ್ಕಲ್‌ನಿಂದ ಅಪಹರಣ ಮಾಡಿ, ಚುರ್ಚಿಗುಂಡಿ ಹತ್ತಿರ ಕುಮದ್ವತಿ (Kumadvati) ನದಿ ಬಳಿ ಕರೆದೊಯ್ದು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ.

ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಕೆ.ಟಿ.ಗುರುರಾಜ್‌ ಅವರ ಪ್ರಕರಣ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ, ಆತನ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇದನ್ನೂ ಓದಿ – 3 ತಿಂಗಳಿಂದ ಸೇವೆ ಇಲ್ಲ, ತಪ್ಪಲಿಲ್ಲ ಶರಾವತಿ ಹಿನ್ನೀರು ಭಾಗದ ಜನರ ಅಲೆದಾಟ, ಇನ್ನಾದರೂ ಕಣ್ಣು ತೆರೆಯುತ್ತಾ ಆಡಳಿತ?

ಸರ್ಕಾರದ ಪರವಾಗಿ ವಕೀಲೆ ಪುಷ್ಪಾ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್‌.ಪಲ್ಲವಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment