SHIVAMOGGA LIVE NEWS | 19 AUGUST 2023
SORABA : ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ದೇವಸ್ಥಾನಕ್ಕೆ (Chandragutti Renukamba Temple) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿದ್ದರು. ಈಚೆಗೆ ದೇವಸ್ಥಾನದಲ್ಲಿ ಕಳ್ಳತನ (Theft) ಯತ್ನ ನಡೆದಿತ್ತು. ಈ ಹಿನ್ನೆಲೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ಮಹತ್ವ ಪಡೆದಿತ್ತು.
![]() |
ಇನ್ನು, ಭೇಟಿ ವೇಳೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನದಲ್ಲಿ ಶ್ರಾವಣ ಪೂಜೆ, ಹೋಮ, ನವಗ್ರಹ ಪೂರ್ವಕ ಸಂಪ್ರೋಕ್ಷಣೆ
6 ಪ್ರಮುಖ ವಿಚಾರ ಪ್ರಸ್ತಾಪ
ಪಾಯಿಂಟ್ 1 – ಚಂದ್ರಗುತ್ತಿ ದೇವಸ್ಥಾನದಲ್ಲಿ ಉಂಟಾಗುವ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆ ಸಹಯೋಗದೊಂದಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.
ಪಾಯಿಂಟ್ 2 – ಕೆಲವು ದಿನಗಳ ಹಿಂದೆ ದೇವಸ್ಥಾನದಲ್ಲಿ ಕಳ್ಳತನ ಯತ್ನವಾಗಿತ್ತು. ಘಟನೆಗೆ ಸಂಬಂಧಿಸಿದಂತೆ, ಕೃತ್ಯವೆಸಗಿದ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಪೊಲೀಸರು (police) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದು ಜಿಲ್ಲಾ ಪೊಲೀಸ್‌ಗೆ ಹೆಮ್ಮೆ ತರುವ ಕೆಲಸ.
ಪಾಯಿಂಟ್ 3 – ಚಂದ್ರಗುತ್ತಿಯಲ್ಲಿ ಹೆಚ್ಚಿನ ಜನಸಂದಣಿ ಇದ್ದು, ಜೇಬುಗಳ್ಳತನ, ಸರಗಳ್ಳತನದಂತಹ ಕೃತ್ಯಗಳು ಜರುಗುವುದನ್ನು ತಡೆಗಟ್ಟಲು ಮತ್ತು ಶೀಘ್ರವಾಗಿ ಪತ್ತೆ ಹಚ್ಚಲು ಸಹಕಾರಿಯಾಗಲು ದೇವಸ್ಥಾನದ ಸುತ್ತಮುತ್ತ ಮತ್ತು ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ದೇವಸ್ಥಾನ ಕಮಿಟಿ ಮತ್ತು ಜಿಲ್ಲಾಧಿಕಾರಿಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ- ಚಂದ್ರಗುತ್ತಿ ದೇವಸ್ಥಾನಕ್ಕೆ ಸಾವಿರ ಸಾವಿರ ಭಕ್ತರು, ವಿಶೇಷ ಪೂಜೆ, ಹೇಗಿತ್ತು ಪೂಜೆ ವೈಭವ?
ಪಾಯಿಂಟ್ 4 – ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ನೆರವಾಗುವಂತೆ, ಈಗಾಗಲೇ ಚಂದ್ರಗುತ್ತಿಯಲ್ಲಿ ಇರುವ ಪೊಲೀಸ್ ಉಪ ಠಾಣೆಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹೋಂ ಗಾರ್ಡ್ ಅಥವಾ ಪೊಲೀಸ್ ಸಿಬ್ಬಂದಿ ನೇಮಕ ಮಾಡಲು ಕ್ರಮ. ಚಂದ್ರಗುತ್ತಿ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆಯನ್ನು ತೆರೆಯುವಂತೆ ಸಾರ್ವಜನಿಕರು ಕೋರಿದ್ದು, ಈ ಬಗ್ಗೆ ಇಲಾಖಾ ಮಾನದಂಡಗಳ ಆಧಾರದ ಮೇಲೆ ಪರಿಶೀಲಿಸಲಾಗುವುದು.
ಪಾಯಿಂಟ್ 5 – ಮಂಗಳವಾರ ಮತ್ತು ಶುಕ್ರವಾರ, ಹುಣ್ಣಿಮೆ, ಹಬ್ಬ ಹರಿದಿನ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಉಂಟಾಗುವ ವಿಶೇಷ ದಿನಗಳಂದು, ಸಂಚಾರ ದಟ್ಟಣೆ ಮತ್ತು ಸಾರ್ವಜನಿಕ ನೂಕು ನುಗ್ಗಲು ತಡೆಗಟ್ಟಲು ಸಹಕಾರಿಯಾಗಲು ಆ ದಿನಗಳಂದು ಮಹಿಳಾ ಪೊಲೀಸ್ ಸಿಬ್ಬಂದಿ, ಹೋಂ ಗಾರ್ಡ್ ಮತು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುತ್ತದೆ.
ಪಾಯಿಂಟ್ 6 – ಹೊರ ಊರುಗಳಿಂದ ಬರುವ ಜನ ಯಾತ್ರಿ ನಿವಾಸ, ಲಾಡ್ಜ್, ಹೋಟೆಲ್ ಗಳಲ್ಲಿ ತಂಗುತ್ತಾರೆ. ಲಾಡ್ಜ್ ಮತ್ತು ಹೋಟೆಲ್ ಮಾಲೀಕರು, ವ್ಯವಸ್ಥಾಪಕರು ಆಗ ಕಡ್ಡಾಯವಾಗಿ ಅವರ ಗುರುತಿನ ಚೀಟಿ ಪಡೆದುಕೊಳ್ಳಬೇಕು.
ಇದನ್ನೂ ಓದಿ- ಶಿವಮೊಗ್ಗದಲ್ಲಿ KSRTC ಬಸ್ ಹತ್ತಿ ವ್ಯಾನಿಟಿ ಬ್ಯಾಗ್ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ
ಶಿಕಾರಿಪುರ ಉಪ ವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸೊರಬ ಇನ್ಸ್‌ಪೆಕ್ಟರ್ ರಾಜಶೇಖರ್, ಪಿಎಸ್‌ಐ ನಾಗರಾಜ್ ಹೆಚ್.ಎನ್, ಚಂದ್ರಗುತ್ತಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್ ಆರ್.ಐ, ಪ್ರಸನ್ನ ಸೇಠ್, ಚಂದ್ರಗುತ್ತಿ ದೇವಸ್ಥಾನ ಕಮಿಟಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200